ಎರಡು ಕ್ಷೇತ್ರಗಳ ಗೆಲ್ಲುವ ವಿಶ್ವಾಸ ಅಚಲ: ಶೀಘ್ರವೇ ಸೂಕ್ತ, ನ್ಯಾಯ ಸಮ್ಮತ ಅಭ್ಯರ್ಥಿಗಳ ಘೋಷಣೆ- ಹೆಚ್.ಡಿ ಕುಮಾರಸ್ವಾಮಿ…

kannada t-shirts

ಬೆಂಗಳೂರು,ಸೆಪ್ಟಂಬರ್,30,2020(www.justkannada.in):  ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಮೂರು ಪಕ್ಷಗಳ ರಾಜಕೀಯ ಚಟುವಟಿಕೆ ಗರಿಗೆದರಿದ್ದು ಈ ನಡುವೆ  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲುವ ಆಚಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.confidence-jds-winning-two-constituencies-by-election-hd-kumaraswamy

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಶಿರಾ ನಮ್ಮದೇ ಕ್ಷೇತ್ರ. ರಾಜರಾಜೇಶ್ವರಿ ನಗರವೂ ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರ. ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ಅಚಲವಾಗಿದೆ. ಸೂಕ್ತ, ನ್ಯಾಯ ಸಮ್ಮತ ಅಭ್ಯರ್ಥಿಗಳನ್ನು ಶೀಘ್ರವೇ ಪಕ್ಷ ಘೋಷಿಸುತ್ತದೆ ಎಂದು ತಿಳಿಸಿದ್ಧಾರೆ.

ಶಿರಾ ನಾವೇ ಗೆಲ್ಲಬೇಕಾದ ಕ್ಷೇತ್ರ…

ಮತ್ತೊಂದು ಟ್ವಿಟ್ಟರ್ ನಲ್ಲಿ ಶಿರಾ ಕ್ಷೇತ್ರದ ಬಗ್ಗೆ ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ಶಿರಾ ನಾವು ಗೆದ್ದ ಕ್ಷೇತ್ರವೂ ಹೌದು, ಆಪರೇಷನ್ ಕಮಲ ಮೆಟ್ಟಿ ಉಳಿಸಿಕೊಂಡ ಕ್ಷೇತ್ರವೂ ಹೌದು. ಸತ್ಯಣ್ಣ ಇಲ್ಲಿ ಗೆದ್ದಿದ್ದರು. ಬಿಜೆಪಿಯವರ ಆಮಿಷಕ್ಕೆ ಆಕರ್ಷಿತರಾಗದೇ ಕ್ಷೇತ್ರವನ್ನು ಜೆಡಿಎಸ್ ಗೆ ಉಳಿಸಿಕೊಟ್ಟಿದ್ದರು. ಸತ್ಯಣ್ಣ ಇದ್ದಿದ್ದರೆ ಈ ಕ್ಷೇತ್ರ ನಮ್ಮಲ್ಲೇ ಇರುತ್ತಿತ್ತು. ನ್ಯಾಯಬದ್ಧವಾಗಿ ಶಿರಾ ನಾವೇ ಗೆಲ್ಲಬೇಕಾದ ಕ್ಷೇತ್ರ ಎಂದು ಹೇಳಿದ್ದಾರೆ.confidence-jds-winning-two-constituencies-by-election-hd-kumaraswamy

ನಮ್ಮ ನೋವಿಗೆ ಗೆಲುವಿನ ಮೂಲಕ ಪರಿಹಾರ ಹುಡುಕ ಬಯಸುತ್ತೇವೆ…

ಹಾಗೆಯೇ ಶಿರಾದಲ್ಲಿ ನಾವು ಸೂತಕದ ಮನೆಯಲ್ಲಿದ್ದೇವೆ. ಹೀಗಿದ್ದೂ ಚುನಾವಣೆ ಎದುರಿಸಬೇಕಿರುವುದು ದುರ್ವಿಧಿ. ನಾವು ಅನಿವಾರ್ಯವಾಗಿ ಎದುರಿಸಬೇಕಾದ ನೋವಿನ ಚುನಾವಣೆ ಇದು. ಇತರರು ಇದನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ್ದಾರೆ. ಅವರಿಗೆ ಇದು ಲಾಭ-ನಷ್ಟದ ವಿಚಾರ. ಆದರೆ ನಾವು ಇಲ್ಲಿ ನಮ್ಮ ನೋವಿಗೆ ಗೆಲುವಿನ ಮೂಲಕ ಪರಿಹಾರ ಹುಡುಕ ಬಯಸುತ್ತೇವೆ ಎಂದು ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Key words: confidence –jds- winning- two constituencies –by- election- HD Kumaraswamy.

website developers in mysore