ಸುಪ್ರೀಂ ಕೋರ್ಟ್ ತೀರ್ಪು ನಮ್ಮ ಪರ ಬರುವ ವಿಶ್ವಾಸವಿದೆ- ಕಾಂಗ್ರೆಸ್ ಶಾಸಕ…

Promotion

ಬೆಂಗಳೂರು,ಜು,17,2019(www.justkannada.in):  ಅತೃಪ್ತ ಶಾಸಕರು ಸ್ಪೀಕರ್ ವಿರುದ್ದ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಲಿದ್ದು, ಈ ತೀರ್ಪು ನಮ್ಮ ಪರ ಬರುವ ವಿಶ್ವಾಸವಿದೆ ಎಂದು ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಬಿ.ಕೆ ಸಂಗಮೇಶ್ವರ್,  ಇಂದು ಸುಪ್ರೀಂಕೋರ್ಟ್ ತೀರ್ಪು ನೀಡಲಿದ್ದು ನಮಗೆ ಯಾವುದೇ ಆತಂಕವಿಲ್ಲ. ತೀರ್ಪು ನಮ್ಮ ಪರವಾಗುವ ವಿಶ್ವಾಸವಿದೆ. ಅತೃಪ್ತ ಶಾಸಕರನ್ನ ಕರೆತರುವುದಕ್ಕೆ ನಮ್ಮ ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.

ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಕುರಿತು ಇಂದು 10.30ಕ್ಕೆ ಸುಪ್ರೀಂಕೋರ್ಟ್  ತೀರ್ಪು ನೀಡಲಿದ್ದು ಎಲ್ಲರ ಚಿತ್ತ ಸುಪ್ರೀಂಕೋರ್ಟ್ ಮೇಲಿದೆ.

Key words: confidence -Supreme Court –order – Congress MLA