ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕವಾದ ಡಿ.ಕೆ ಶಿವಕುಮಾರ್ ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತು ಕೈ’ ಶಾಸಕರಿಂದ ಅಭಿನಂದನೆ…

Promotion

ಬೆಂಗಳೂರು,ಮಾ,11,2020(www.justkannada.in):  ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕವಾದ  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತು ಕಾಂಗ್ರೆಸ್ ಶಾಸಕರು ಅಭಿನಂದನೆ ಸಲ್ಲಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರನ್ನ ಎಐಸಿಸಿ ನೇಮಕ ಮಾಡಿದೆ. ಜತೆ ಮಾಜಿ ಸಿಎಂ ಸಿದ್ಧರಾಮಯ್ಯರನ್ನ ವಿಪಕ್ಷ ನಾಯಕ ಸ್ಥಾನ ಮತ್ತು ಸಿಎಲ್ ಪಿ ನಾಯಕ ಸ್ಥಾನ ಎರಡರಲ್ಲೂ ಮುಂದುವರೆಸಿದೆ.   ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಬಹುಕಾಲದಿಂದ ಲಾಬಿ ನಡೆಸುತ್ತಿದ್ದ ಡಿಕೆಶಿ ಅತೀವ ಸಂತಸಗೊಂಡಿದ್ದಾರೆ.

ಎಐಸಿಸಿ ಇಂದ ತಮ್ಮ ನೇಮಕಾತಿ ಕುರಿತು ಅಧಿಕೃತ ಆದೇಶ ಹೊರಬೀಳುತ್ತಿದ್ದಂತೆ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯನವರನ್ನು ಭೇಟಿಯಾದ ಡಿ.ಕೆ. ಶಿವಕುಮಾರ್ ಪುಷ್ಪಗುಚ್ಛ ನೀಡಿ ಧನ್ಯವಾದ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಕೂಡಾ ಪಕ್ಷದ ನೂತನ ಅಧ್ಯಕ್ಷ ಶಿವಕುಮಾರ್ ಅವರನ್ನು ಅಭಿನಂದಿಸಿದ್ದಾರೆ.

ಇನ್ನು  ವಿಧಾನಸೌಧದಲ್ಲಿ  ನೂತನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಶಾಸಕರಾದ ಪ್ರಿಯಾಂಕ್ ಖರ್ಗೆ, ವಿ.ಮುನಿಯಪ್ಪ,  ಎಂವೈ ಪಾಟೀಲ್ ಮಾಜಿ ಸಂಸದ ಉಗ್ರಪ್ಪ ಸೇರಿ ಹಲವು ಶಾಸಕರಿಂದ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಡಿ.ಕೆ ಶಿವಕುಮಾರ್ ಶಾಮನೂರು ಶಿವಶಂಕರಪ್ಪ ಅವರ ಕಾಲಿಗೆ ನಮಸ್ಕರಿಸಿದರು.

Key words: Congratulations – DK Sivakumar-former CM Siddaramaiah, – appointment – KPCC president.