ಕಾಂಗ್ರೆಸ್ ಈಗ ಒಡೆದ ಮನೆ: ಮೂರು ತಿಂಗಳಲ್ಲಿ ರಾಜ್ಯದ ಚಿತ್ರಣವೇ ಬದಲಾಗುತ್ತೆ- ಸಿಎಂ ಇಬ್ರಾಹಿಂ.

Promotion

ರಾಯಚೂರು,ಮೇ,21,2022(www.justkannada.in): ಮೂರು ತಿಂಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣವೇ ಬದಲಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ತಿಳಿಸಿದರು.

ರಾಯಚೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಇಬ್ರಾಹಿಂ, ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸಂಸ್ಕೃತಿ ಇಲ್ಲ. ಕಾಂಗ್ರೆಸ್ ಈಗ ಒಡೆದ ಮನೆಯಾಗಿದೆ. ಕಮಿಷನ್ ವಿಚಾರಕ್ಕೆ ಕಾಂಗ್ರೆಸ್- ಬಿಜೆಪಿ ಮಧ್ಯೆ ಜಗಳ ಉಂಟಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಚಿಕ್ಕಪ್ಪ- ದೊಡ್ಡಪ್ಪನ ಮಕ್ಕಳು.  ಜೆಡಿಎಸ್ ಪರಿಚಯ ಮಾಡುವ ಅಗತ್ಯವಿಲ್ಲ ಎಂದರು.JDS- join- issue-CM Ibrahim- clarified.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾವೇ ನಂಬರ್ ಒನ್. ಬಿಜೆಪಿ ಸೆಕೆಂಡ್. ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಹೋಗುತ್ತದೆ. ಮೂರು ತಿಂಗಳಲ್ಲಿ ರಾಜ್ಯದ ಚಿತ್ರಣವೇ ಬದಲಾಗುತ್ತದೆ ಎಂದು ಸಿಎಂ ಇಬ್ರಾಹಿಂ ಹೇಳಿದರು.

Key words: Congress – broken house-state- image -changes – three months-CM Ibrahim.