ಮಸ್ಕಿಯಲ್ಲಿ ಮುದುಡಿದ ತಾವರೆ: ಕಾಂಗ್ರೆಸ್ ಅಭ್ಯರ್ಥಿ ಮೇಲು ‘ಕೈ’

ರಾಯಚೂರು,ಮೇ,2,2021(www.justkannada.in):  ಭಾರಿ ಕುತೂಹಲ ಮೂಡಿಸಿರುವ ರಾಯಚೂರಿನ ಮಸ್ಕಿ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳಗೆ ಗೆಲುವು ಬಹುತೇಕ ಖಚಿತವಾಗಿದೆ.jk

ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಗೆ ಭಾರಿ ಮುಖಭಂಗವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ 15 ಸಾವಿರಕ್ಕೂ ಹೆಚ್ಚು ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ಈ ಮೂಲಕ ಗೆಲುವು ಖಚಿತವಾಗಿದ್ದು ಚುನಾವಣಾ ಆಯೋಗದ ಅಧಿಕೃತ ಘೋಷಣೆಯೊಂದೆ ಬಾಕಿ ಇದೆ.

ಪ್ರತಾಪ್ ಗೌಡ ಪಾಟೀಲ್  ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಗೆಲುವು ಸಾಧಿಸಿ ನಂತರ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಈ ನಡುವೆ ಬಸನಗೌಡ ತುರುವಿಹಾಳ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದರು.

Key words: Congress candidate – Masky -constituncy- win.