ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ಮೀಸಲಾತಿ ಮಸೂದೆ ಮಂಡನೆ ಶ್ರೇಯಸ್ಸು ಸಲ್ಲಬೇಕು – ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ.

Promotion

ನವದೆಹಲಿ,ಸೆಪ್ಟಂಬರ್,19,2023(www.justkannada.in):  ಇಂದು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆಯಾಗಿದ್ದು ಈ ಸಂಬಂಧ   ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, 2010ರಲ್ಲಿಯೇ ನಾವು ಮಹಿಳಾ ಮೀಸಲಾತಿ ಬಿಲ್ ಮಂಡಿಸಿದ್ದೆವು, ಹೀಗಾಗಿ ಇದರ ಶ್ರೇಯಸ್ಸು ಕಾಂಗ್ರೆಸ್ ಪಕ್ಷಕ್ಕೆ ಸಲ್ಲಬೇಕು ಎಂದರು. ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದರ ಜೊತೆಗೆ ಮಹಿಳಾ ಮೀಸಲಾತಿ ಬಿಲ್ ​ನಲ್ಲಿ ಒಬಿಸಿ ಒಳ ಮೀಸಲಾತಿಗೆ ಮನವಿ ನೀಡುವಂತೆ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು.

Key words: Congress – credited – Women’s Reservation Bill – AICC President- Mallikarjuna Kharge