ಗ್ಯಾರಂಟಿ ಯೋಜನೆಗಳ ಜಾರಿಗೆ ಕಾಂಗ್ರೆಸ್ ಸರ್ಕಾರ ವಿಳಂಬ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ.

Promotion

ಬೆಂಗಳೂರು,ಮೇ,24,2023(www.justkannada.in): ಗ್ಯಾರಂಟಿ ಯೋಜನೆಗಳ ಜಾರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ವಿಳಂಬ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಚುನಾವಣೆ ಸಂದರ್ಭದಲ್ಲಿ ಎಲ್ಲರಿಗೂ ಫ್ರೀ ಫ್ರೀ ಅಂತಾ ಹೇಳುತ್ತಿದ್ದರು. ಈಗ ಗೈಡ್‌ ಲೈನ್ಸ್​​ ಮಾಡುತ್ತೇವೆ ಅಂತಾ ಹೇಳುತ್ತಿದ್ದಾರೆ. ಮೊದಲ ಸಂಪುಟದಲ್ಲೇ ಯೋಜನೆ ಜಾರಿ ಅಂತಾ ಹೇಳಿದ್ದರು. ಎದ್ದೇಳು ಕರ್ನಾಟಕ ಅಂತಾ ಹೇಳ್ತಿದ್ರಲ್ಲ, ಈಗ ಎದ್ದೇಳಿಸಿ. ಯಾವಾಗ ಕಾರ್ಯರೂಪಕ್ಕೆ ಬರುತ್ತೋ ಕಾದು ನೋಡೋಣ. ಕರೆಂಟ್ ಬಿಲ್ ಕಟ್ಟಬೇಡಿ ಅಂತಾ ನಾವು ಕರೆ ಕೊಡುತ್ತೇವೆ ಎಂದು ಹರಿಹಾಯ್ದರು.

Key words: Congress –delay -implementation -guarantee schemes- Former CM- HD Kumaraswamy