ಕಾಂಗ್ರೆಸ್ ಜೆಡಿಎಸ್ ಮೈತ್ರಿ 2 ಡಿಜಿಟ್ ಕೂಡ ತಲುಪಲ್ಲ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭವಿಷ್ಯ…

Promotion

ಕಲ್ಬುರ್ಗಿ,ಮೇ,13,2019(www.justkannada.in):  ಲೋಕಸಭಾ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಎರಡು ಡಿಜಿಟ್ ಕೂಡ ದಾಟಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಎಸ್ ಯಡಿಯೂರಪ್ಪ ಭವಿಷ್ಯ ನುಡಿದರು.

ಕಲ್ಬುರ್ಗಿಯಲ್ಲಿ ಇಂದು ಮಾತನಾಡಿದ ಬಿಎಸ್ ಯಡಿಯೂರಪ್ಪ, ಪ್ರಧಾನಿ ಮೋದಿ  ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಮೋದಿ ಅವರ ಬಗ್ಗೆ ಮಾತನಾಡುವುದು ಹಲವು ನಾಯಕರಿಗೆ ಚಾಳಿಯಾಗಿದೆ. ಪ್ರಧಾನಿ ಮೋದಿ ಬಗ್ಗೆ ಮಾತನಾಡಿದರೇ ಗೌರವ ಹೆಚ್ಚಾಗುತ್ತದೆ ಎಂಬ ನಂಬಿಕೆ ಅವರಿಗೆ ಎಂದು ಲೇವಡಿ ಮಾಢಿದರು.

ರಾಜ್ಯದಲ್ಲಿ ಕಾಂಗ್ರೆಸ್  ನ ಹಲವು ಸಂಸದರ ಸೋಲು  ಖಚಿತ. ಕಾಂಗ್ರೆಸ್ ಈ ಬಾರಿ 2 ಡಿಜಿಟ್ ಕೂಡ ದಾಟಲ್ಲ. ಕುಂದಗೋಳ ಚಿಂಚೋಳಿಯಲ್ಲಿ ನಮ್ಮ ಅಭ್ಯರ್ಥಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words: Congress -did not -reach  -2 digit- Former CM BS Yeddyurappa