ಕಾಂಗ್ರೆಸ್ ಸಂಸ್ಥಾಪನಾ ದಿನಾಚಾರಣೆ: ‘ಕೈ’ ನಾಯಕರಿಂದ ‘ಸಂವಿಧಾನ ಉಳಿಸಿ ಭಾರತ ರಕ್ಷಿಸಿ’ ಸದ್ಭಾವನಾ ನಡಿಗೆ…… 

Promotion

ಬೆಂಗಳೂರು,ಡಿ.28,2019(www.justkannada.in): ಇಂದು ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆ ಇಂದು ಕಾಂಗ್ರೆಸ್ ನಾಯಕರು ಸಂವಿಧಾನ ಉಳಿಸಿ ಭಾರತ ರಕ್ಷಿಸಿ ಎಂಬ ಹೆಸರಿನಲ್ಲಿ ಬೆಂಗಳೂರಿನಲ್ಲಿ ಪಾದಯಾತ್ರೆ ನಡೆಸಿದರು.

ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ದೇಶಾದ್ಯಂತ ಕಾಂಗ್ರೆಸ್ ಸಂವಿಧಾನ ಉಳಿಸಿ ಭಾರತ ರಕ್ಷಿಸಿ ಜಾಥಾ ಆಯೋಜಿಸಿತ್ತು. ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಕೆಪಿಸಿಸಿ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಸದ್ಭಾವನ ನಡಿಗೆ ನಡೆಸಿದರು.

ಪಾದಯಾತ್ರೆಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ  ಮಾಜಿ ಸಚಿವ ಡಿ.ಕೆ ಶಿವಕುಮಾರ್, ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ವೀರಪ್ಪ ಮೊಯ್ಲಿ ಸೇರಿ ನೂರಾರು ಕಾರ್ಯಕರ್ತರು ಸದ್ಬಾವನಾ ನಡಿಗೆಯಲ್ಲಿ ಭಾಗಿಯಾಗಿದ್ದರು. .

ಈ ಸಮಯದಲ್ಲಿ ಮಾತನಾಡಿದ ಮಾಜಿ ಸಚಿವ ಡಿಕೆ ಶಿವಕುಮಾರ್​, ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕಾಗಿ ಈ ಪಾದಯಾತ್ರೆ ಮಾಡುತ್ತಿಲ್ಲ. ಇದು ನನ್ನ ಕರ್ತವ್ಯ. ದೇಶದಲ್ಲಿ ಸಂವಿಧಾನ ಉಳಿಸಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ. ಅದಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದೇವೆ  ಎಂದು ತಿಳಿಸಿದರು.

key words: Congress Founding Day- Save the Constitution – protect india-bangalore