ಲೋಕಸಭಾ ಚುನಾವಣೆ ಮೇಲೆ ಕಾಂಗ್ರೆಸ್ ಸರ್ಕಾರದ ಭವಿಷ್ಯ ನಿಂತಿದೆ- ಮಾಜಿ ಸಿಎಂ ಹೆಚ್.ಡಿಕೆ.  

Promotion

ಬೆಂಗಳೂರು,ಮೇ,25,2023(www.justkannada.in): ಕಾಂಗ್ರೆಸ್ ಸರ್ಕಾರದ ಭವಿಷ್ಯ ಲೋಕಸಭಾ ಚುನಾವಣೆ ಮೇಲೆ ನಿಂತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನುಡಿದಿದ್ದಾರೆ.  

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ,  ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಕಾಲ ಇರುತ್ತೊ ಇಲ್ವೋ ಗೊತ್ತಿಲ್ಲ. ಈ ಸರ್ಕಾರದ ಭವಿಷ್ಯ ಲೋಕಸಭಾ ಚುನಾವಣೆ ಮೇಲೆ ನಿಂತಿದ್ದೆ. ನಾನು ಭವಿಷ್ಯ ಹೇಳುತ್ತಿದ್ದ, ರಾಜಕೀಯ ಸ್ಥಿತಿಗತಿ ನೋಡಿ ಹೇಳುತ್ತಿದ್ದೇನೆ ಎಂದು ತಿಳಿಸಿದರು.

ನಮಗೆ ಕುಟುಂಬ ರಾಜಕಾರಣ ಅಂತ ಟೀಕೆ ಮಾಡುತ್ತಾರೆ. ಅದಕ್ಕೆ ನೀವು ಮುಂದೆ ಬಂದು ಪಕ್ಷ ಸಂಘಟನೆ ಮಾಡಿ. ನಿಮ್ಮ ಬೆನ್ನಿಗೆ ನಾನು ನಿಲ್ಲುತ್ತೇನೆ ಎಂದು ಕಾರ್ಯಕರ್ತರಿಗೆ ತಿಳಿಸಿದ ಹೆಚ್.ಡಿ ಕುಮಾರಸ್ವಾಮಿ ಅವರು,  ಸಿದ್ದರಾಮಯ್ಯ ಅವರ 17 ವರ್ಷದ ಮೊಮ್ಮಗನನ್ನು ರಾಜಕೀಯಕ್ಕೆ ತರುತ್ತೇನೆ ಅನ್ನುತ್ತಾರೆ. ಅದು ಕುಟುಂಬ ರಾಜಕಾರಣ ಅಲ್ವಾ? ಅದರ ಬಗ್ಗೆ ಯಾರು ಟೀಕೆ ಮಾಡಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Key words: Congress-government- future -depends – Lok Sabha- elections- H.D Kumaraswamy