ಗ್ಯಾರಂಟಿ ಹೆಸರೇಳಿ ಬಡವರಿಗೆ ಕಾಂಗ್ರೆಸ್ ಸರ್ಕಾರ ಟೋಪಿ ಹಾಕುತ್ತಿದೆ- ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ.

Promotion

ಹುಬ್ಬಳ್ಳಿ,ಜೂನ್,26,2023(www.justkannada.in): ರಾಜ್ಯದ ಜನರಿಗೆ ಮೋಸ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಗ್ಯಾರಂಟಿ ಹೆಸರೇಳಿ ಬಡವರಿಗೆ ಕಾಂಗ್ರೆಸ್ ಸರ್ಕಾರ ಟೋಪಿ ಹಾಕುತ್ತಿದೆ ಎಂದು  ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕಿಡಿಕಾರಿದರು.

ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಕೆ.ಎಸ್ ಈಶ್ವರಪ್ಪ, ಕಾಂಗ್ರೆಸ್ ನವರು ಚುನಾವಣೆಗೂ ಮುನ್ನ 5 ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದಿದ್ದರು. ಅಧಿಕಾರಕ್ಕೆ ಬಂದು ಒಂದು ತಿಂಗಳಾದರೂ ಗ್ಯಾರಂಟಿ ಜಾರಿಯಾಗಿಲ್ಲ. ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮೊದಲನೇ ಕ್ಯಾಬಿನೆಟ್​​ ನಲ್ಲಿ ಯುವಕರಿಗೆ ಮೋಸ ಮಾಡಿದ್ದಾರೆ. ರಾಜ್ಯದ ಒಬ್ಬ ಯವಕನಿಗೂ ಹಣ ಕೊಟ್ಟಿಲ್ಲ. ರಾಜ್ಯ ಸರ್ಕಾರ ಮನೆ ಯಜಮಾನಿ ಖಾತೆಗೆ ಇನ್ನೂ ಹಣ ಹಾಕಿಲ್ಲ. ಅಕ್ಕಿ ವಿತರಣೆ ಮಾಡಲು ಕೇಂದ್ರ ಪೂರೈಕೆ ಮಾಡುತ್ತಿಲ್ಲ ಅಂತಾರೆ. ಗ್ಯಾರಂಟಿ ಹೇಳಿ ಬಡಜನರಿಗೆ ಟೋಪಿ ಹಾಕಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಹರಿಹಾಯ್ದರು.

Key words:  Congress -government -poor – guarantee-Former minister- KS Eshwarappa.