ಡಿ.9 ರಂದು ಸಿಹಿಸುದ್ದಿ ಕೊಡುತ್ತೇವೆ ಎಂದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಡಿಸೆಂಬರ್ 01, 2019 (www.justkannada.in): ಡಿ.9 ರಂದು ಸಿಹಿಸುದ್ದಿ ಕೊಡುತ್ತೇವೆ ಎಂದು ಮಾಜಿ ಸಂಸದ ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೂಚ್ಯವಾಗಿ ಹೇಳಿದ್ದಾರೆ. ಏನೀದು ಸಿಹಿ ಸುದ್ದಿ ಎಂಬ ವಿಷಯ ಚರ್ಚೆಗೀಡು ಮಾಡಿದೆ.

ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೈತ್ರಿ ಬಗ್ಗೆ ಈಗಲೇ ಭವಿಷ್ಯ ಹೇಳಲಾಗದು. ಅವರು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹದಿನೈದು ಸ್ಥಾನಗಳನ್ನು ಗೆಲ್ಲಲೇಬೇಕಿದೆ. ಫಲಿತಾಂಶದ ಬಳಿಕ ಭವಿಷ್ಯದ ಬಗ್ಗೆ ಚಿಂತಿಸಲಾಗುವುದು ಎಂದು ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದರು.

ಶಿವಸೇನಾ,‌ ಎನ್‌ಸಿಪಿ, ಕಾಂಗ್ರೆಸ್ ಸೇರಿ ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ರಚನೆಯಾಗಿದೆ. ನಿಜವಾಗಲೂ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಮಹಾರಾಷ್ಟ್ರದಲ್ಲಿ ಮೈತ್ರಿಗೆ ಮನಸಿರಲಿಲ್ಲ. ಆದರೆ ಬಿಜೆಪಿಯನ್ನು ದೂರಿವಿಡಲು, ಎಡಪಕ್ಷಗಳ ಒತ್ತಡ‌ದ‌ ಮೇರೆಗೆ ಪ್ರಜಾಪ್ರಭುತ್ವ ಸಾಮಾಜಿಕ ನ್ಯಾಯಕ್ಕಾಗಿ ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ‌ರಚನೆಯಾಗಿದೆ ಎಂದರು.