ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದು ಹೀಗೆ…

Promotion

ನವದೆಹಲಿ,ಫೆ,1,2020(www.justkannada.in) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಟೀಕೆ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ 2020-21ನೇ ಸಾಲಿನ ಬಜೆಟ್ ಇತಿಹಾಸದಲ್ಲೇ ಸುದೀರ್ಘವಾಗಿತ್ತು. ಆದತೆ ಈ ಬಜೆಟ್ ಭಾಷಣದಲ್ಲಿ ಏನೇನು ಇಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಬಹುಶಃ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಇತಿಹಾಸದಲ್ಲೇ ಅತ್ಯಂತ ಸುದೀರ್ಘ ಎನಿಸುತ್ತದೆ. ಆದರೆ, ಅವರು ಮಂಡಿಸಿದ ಬಜೆಟ್ ಸಂಪೂರ್ಣ ಟೊಳ್ಳಾಗಿದೆ. ಬಜೆಟ್ ನಲ್ಲಿ ಉದ್ಯೋಗ ನಿವಾರಣೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ದೇಶವನ್ನು ನಿರುದ್ಯೋಗ ಎಂಬ ಸಮಸ್ಯೆ ಬೆನ್ನು ಬಿಡದೇ ಕಾಡುತ್ತಿದ್ದು, ಇದನ್ನು ಬಗೆಹರಿಸುವ ಬಗ್ಗೆ ಬಜೆಟ್ ನಲ್ಲಿ ಯಾವುದೇ ಅಂಶಗಳು ಕಾಣುತ್ತಿಲ್ಲ. ಕೇಂದ್ರ ಸರ್ಕಾರಕ್ಕೆ ನಿರುದ್ಯೋಗ ಸಮಸ್ಯೆ ಹೋಗಲಾಡಿಸುವ ಆಲೋಚನೆಯೇ ಇದ್ದಂತೆ ಗೋಚರಿಸುತ್ತಿಲ್ಲ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

Key words: Congress leader- Rahul Gandhi – criticized -Union Budget.