ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ನಾಯಕರು ಕರೆ ಕೊಟ್ಟಿದ್ದ ಬಂದ್ ರದ್ದು.

Promotion

ಬೆಂಗಳೂರು,ಮಾರ್ಚ್,9,2023(www.justkannada.in): ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ನಾಯಕರು ನಾಳೆಗೆ ಕರೆ ಕೊಟ್ಟಿದ್ದ ಬಂದ್ ಅನ್ನು ರದ್ದುಗೊಳಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ನಾಳೆ ಬೆಳಿಗ್ಗೆ 9 ರಿಂದ 11ಗಂಟೆವರೆಗೆ  ಅಂದರೆ ಎರಡು ಗಂಟೆಗಳ ಕಾಲ ಬಂದ್ ಗೆ ಕಾಂಗ್ರೆಸ್ ನಾಯಕರು ಕರೆ ನೀಡಿದ್ದರು. ಆದರೆ ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಿದ್ದು ಹಾಗೂ ಸಾರ್ವಜನಿಕರಿಗೆ ಅನಾನುಕೂಲವಾಗುವ ಹಿನ್ನೆಲೆ ಬಂದ್ ಅನ್ನು ಕಾಂಗ್ರೆಸ್ ನಾಯಕರು ಹಿಂಪಡೆದಿದ್ದಾರೆ.

Key words: Congress leaders- bjp-corruption – bandh –  cancelled.