ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್  ಪ್ರಣಾಳಿಕೆ ಬಿಡುಗಡೆ:  ‘ಕೈ’ ನೀಡಿರುವ ಭರವಸೆಗಳೇನು..?

Promotion

ಬೆಂಗಳೂರು,ಮೇ,2,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು ಚುನಾವಣಾ ಕಣ ರಂಗೇರಿದೆ . ಈ ನಡುವೆ ನಿನ್ನೆಯಷ್ಟೇ ಬಿಜೆಪಿ ತನ್ನ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇದೀಗ ಕಾಂಗ್ರೆಸ್ ಸಹ ತನ್ನ ಪ್ರಣಾಳಿಕೆಯನ್ನ ರಿಲೀಸ್ ಮಾಡಿದೆ.

ಕಾಂಗ್ರೆಸ್​ ಬರಲಿದೆ, ಪ್ರಗತಿ ತರಲಿದೆ ಎನ್ನುವ ಘೋಷ ವಾಕ್ಯದೊಂದಿಗೆ ‘ಸರ್ವ ಜನಾಂಗದ ಶಾಂತಿಯ ತೋಟ ಇದುವೆ ಕಾಂಗ್ರೆಸ್​ ಬದ್ಧತೆ’ ಎನ್ನುವ ಹೆಸರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಣಾಳಿಕೆಯನ್ನುಬಿಡುಗಡೆಗೊಳಿಸಿದ್ದಾರೆ.  ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಪ್ರಣಾಳಿಕೆಯಲ್ಲಿರುವ ಅಂಶಗಳು ಈ ಕೆಳಕಂಡಂತಿದೆ..

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ

ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ

ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ

ರಾತ್ರಿ ಪಾಳಿಯ ಪೊಲೀಸ್​ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ

ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್​

ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ

ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ.

ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು

ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ.

ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ

ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ ಮುಂತಾದ ಭರವಸೆಗಳನ್ನ ನೀಡಿದೆ.

-V.Mahesh kumar

Key words: Congress –manifesto- release -state -assembly -elections