ನಾಳೆಯಿಂದ ಕಾಂಗ್ರೆಸ್ ನಿಂದ ಮೇಕೆದಾಟು ಪಾದಯಾತ್ರೆ: ಕೊನೆಯ ದಿನ ಸಮಾವೇಶಕ್ಕೆ ಚಿಂತನೆ.

Promotion

ಬೆಂಗಳೂರು,ಫೆಬ್ರವರಿ,26,2022(www.justkannada.in):  ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಮೊದಲ ಹಂತದ ಪಾದಯಾತ್ರೆ ಬಳಿಕ ಇದೀಗ 2ನೇ ಹಂತದಲ್ಲಿ ಪಾದಯಾತ್ರೆಗೆ ಸಜ್ಜಾಗಿದೆ.

ನಾಳೆಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಮನಗರದಿಂದ ಪಾದಯಾತ್ರೆ ಆರಂಭವಾಗಲಿದೆ. ಫೆಬ್ರವರಿ 28ಕ್ಕೆ ಪಾದಯಾತ್ರೆ ಬಿಡದಿಯಿಂದ ಕೆಂಗೇರಿಗೆ ತಲುಪಲಿದ್ದು ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಸೇರಿ ಹಲವು ಮಂದಿ ಪಾಲ್ಗೊಳ್ಳಲಿದ್ದಾರೆ.

ಇನ್ನು ಪಾದಯಾತ್ರೆಯ ಕೊನೆಯ ದಿನ ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾವೇಶ ನಡೆಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಆರಂಭಿಸಿದ್ಧ ಕಾಂಗ್ರೆಸ್ ಕೊರೋನಾ ಹಿನ್ನೆಲೆಯಲ್ಲಿ ಪಾದಯಾತ್ರೆ ಸ್ಥಗಿತಗೊಳಿಸಲಾಗಿತ್ತು.

Key words: Congress –mekedatu-padayatra-tomorrow.