ಕಾಂಗ್ರೆಸ್ ನಾಯಕರಿಗೆ ಪಾದಯಾತ್ರೆ ಮಾಡುವ ನೈತಿಕತೆ ಇಲ್ಲ- ಸಿಎಂ ಬೊಮ್ಮಾಯಿ ಟೀಕೆ.

Promotion

ಬೆಂಗಳೂರು,ಮಾರ್ಚ್,1,2022(www.justkannada.in):  ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟೀಕೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯೋಜನೆ ಜಾರಿ ಮಾಡಲಿಲ್ಲ. ಈಗ ಅವರಿಗೆ ಪಾದಯಾತ್ರೆ ಮಾಡುವ ನೈತಿಕತೆ ಇಲ್ಲ. ರಾಜ್ಯ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ ಕಾಂಗ್ರೆಸ್ ರಾಜಕೀಯ ಹಿತಾಸಕ್ತಿಗಾಗಿ ಜನರಿಗೆ ಸಂಕಷ್ಟ ಎದುರಾಗಿದೆ.  ಬೆಂಗಳೂರಿನ ಜನ ಟ್ರಾಫಿಕ್ ನಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಅದು ಬಿಟ್ಟು ಬೇರೆ ಯಾವುದೇ ಉಪಯೋಗವಿಲ್ಲ ಎಂದರು.

ಉಕ್ರೇನ್ ನಲ್ಲಿ  ವಿದ್ಯಾರ್ಥಿಗಳು ಸಿಲುಕಿದ್ದಾರೆ.  ಈ ಬಗ್ಗೆ ವಿದೇಶಾಂಗ ಸಚಿವರ ಜತೆ ಚರ್ಚಿಸಿದ್ದೇನೆ.  ಆಹಾರ ನೀರು ಒದಗಿಸುವಂತೆ ಮನವಿ ಮಾಡಿದ್ದೇನೆ.  ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸಿಲುಕಿದ್ದಾರೆ.  ಏರ್ ಲಿಫ್ಟ್ ಗೆ ಸಮಸ್ಯೆಯಾಗಿದೆ. ಸಮಯ ನೋಡಿಕೊಂಡು ಕನ್ನಡಿಗರನ್ನ ವಾಪಸ್ ಕರೆ ತರಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: Congress-padayatra-CM Basavaraj Bommai.