ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಆ ಪಕ್ಷಕ್ಕೆ ಯಾರು ಹೋಗ್ತಾರೆ- ಡಿಕೆ ಶಿವಕುಮಾರ್ ಗೆ ಬಿಜೆಪಿ ಶಾಸಕ ತಿರುಗೇಟು.

Promotion

ಹಾವೇರಿ,ಜನವರಿ,21,2023(www.justkannada.in):  ಹಾವೇರಿಯಲ್ಲಿ ಇಬ್ಬರು ಬಿಜೆಪಿ ಶಾಸಕರು ಕಾಂಗ್ರೆಸ್ ಬರಲು ಸಜ್ಜಾಗಿದ್ದಾರೆ. ಆದರೆ ಸ್ಥಾನ ಖಾಲಿ ಇಲ್ಲ ಎಂದು ಕರೆದುಕೊಂಡಿಲ್ಲ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ  ಡಿ.ಕೆ ಶಿವಕುಮಾರ್ ಗೆ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ವಿರೂಪಾಕ್ಷಪ್ಪ, ಡಿಕೆ ಶಿವಕುಮಾರ್ ಸಾಯಂಕಾಲ ಮಾತನಾಡಿರಬಹುದು.ಡಿ ಕೆಶಿ ಸಾಯಂಕಾಲ ಡಬಲ್ ಆಗುತ್ತಾರೆ.   ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಆ ಪಕ್ಷಕ್ಕೆ ಯಾರು ಹೋಗುತ್ತಾರೆ. ಯಾವುದೇ ಶಾಸಕ ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಹೋಗಲ್ಲ. ಬಿಜೆಪಿಯಲ್ಲಿ ಟಿಕೆಟ್ ಕೊಡಲಿ ಬಿಡಲಿ ಬಿಜೆಪಿಯಲ್ಲೇ ಇರುತ್ತೇನೆ ಎಂದು ಸ್ಪಷ್ಟನೆ ನೀಡಿದರು.

 

Key words: Congress party – sinking -ship- BJP- MLA – DK Shivakumar.