ಸೋನಿಯಾ ಗಾಂಧಿ ಬಳಿಕ ಪ್ರಿಯಾಂಕಾ ಗಾಂಧಿ ಅವರಿಗೂ ಕೋವಿಡ್ ಪಾಸಿಟಿವ್..

Promotion

ನವದೆಹಲಿ,ಜೂನ್, 3,2022(www.justkannada.in):  ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬಳಿಕ ಇದೀಗ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಅವರಿಗೂ  ಕೋವಿಡ್ ಪಾಸಿಟಿವ್ ದೃಢವಾಗಿದೆ.

ಹೋಮ್ ಐಸೋಲೇಷನ್ ನಲ್ಲಿರುವ ‘ಕೈ’ ನಾಯಕಿ ಪ್ರಿಯಾಂಕಾ ಗಾಂಧಿ ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೂ ಸಣ್ಣ ಮಟ್ಟದ ಕೋವಿಡ್ ಲಕ್ಷಣಗಳಿದ್ದ ಕಾರಣ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೆ. ಅದರ ವರದಿ ಬಂದಿದ್ದು, ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಕೋವಿಡ್​ ನ ಎಲ್ಲ ಮಾರ್ಗಸೂಚಿ ಅನುಸರಿಸುವ ಮೂಲಕ ಮನೆಯಲ್ಲಿ ಸೆಲ್ಫ್ ಕ್ವಾರಂಟೈನ್​​ ಗೊಳಗಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮ ಕೈಗೊಂಡು, ಪರೀಕ್ಷೆಗೊಳಪಡುವಂತೆ ಮನವಿ  ಮಾಡಿದ್ದಾರೆ.

ನಿನ್ನೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಅವರ ಆರೋಗ್ಯದಲ್ಲಿ ಸೌಮ್ಯ ಸ್ವಭಾವದ ಜ್ವರ ಹಾಗೂ ಕೋವಿಡ್ ರೋಗಲಕ್ಷಣ ಕಂಡು ಬಂದಿದೆ ಎಂದು ಸುರ್ಜೇವಾಲಾ ಹೇಳಿದ್ದರು.

Key words: congress- Priyanka Gandhi- after-corona positive.