ರಾಜೀನಾಮೆಗೆ ಆಗ್ರಹಿಸಿ ಸಿಎಂ ನಿವಾಸಕ್ಕೆ ಮುತ್ತಿಗೆಗೆ ಕಾಂಗ್ರೆಸ್ ಯತ್ನ: ಸಿದ್ಧರಾಮಯ್ಯ ಸೇರಿ ‘ಕೈ’ ನಾಯಕರು ಪೊಲೀಸರ ವಶಕ್ಕೆ

ಬೆಂಗಳೂರು: ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್  ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ರಾಜ್ಯ ಕಾಂಗ್ರೆಸ್ ನಾಯಕರು ಇಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ರೇಸ್​ ಕೋರ್ಸ್​ ರಸ್ತೆಯ ಕಾಂಗ್ರೆಸ್​​ ಭವನದಿಂದ ಪ್ರತಿಭಟನಾ ರ್ಯಾಲಿ ನಡೆಸಿದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪೋಸ್ಟರ್​, ಸೂಟ್​ಕೇಸ್, ಹಣವಿರುವ ಗುಟ್ಕಾ ಬ್ಯಾಗ್​, ನಕಲಿ ನೋಟ್​ ಪ್ರದರ್ಶಿಸಿ  ಸರ್ಕಾರದ ವಿರುದ್ದ ಕಿಡಿಕಾರಿದರು. ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಸುರ್ಜೇವಾಲ, ವಿಪಕ್ಷನಾಯಕ ಸಿದ್ದರಾಮಯ್ಯ, ಶಾಸಕ ರಾಮಲಿಂಗಾರೆಡ್ಡಿ, ಶಾಸಕ ದಿನೇಶ್​​ ಗುಂಡೂರಾವ್, ಕೆ.ಜೆ.ಜಾರ್ಜ್, ಕೃಷ್ಣ ಭೈರೇಗೌಡ ಹಾಗೂ ಸಲೀಂ ಅಹ್ಮದ್ ಭಾಗಿಯಾಗಿದ್ದರು.

ಮಾಜಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಪ್ರತಿಭಟನಾರ್ಯಾಲಿಯಲ್ಲಿ ತೆರಳಿ ರೇಸ್ ಕೋರ್ಸ್ ನಲ್ಲಿರುವ ಸಿಎಂ ಬಸರವಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನ ತಡೆದು ವಶಕ್ಕೆ ಪಡೆದರು.

Key words: Congress- protest-against-CM- Basavaraja bommai