ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆಗೆ ಸಜ್ಜು.

kannada t-shirts

ಬೆಂಗಳೂರು,ಜುಲೈ,21,2022(www.justkannada.in): ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ  ಎಐಸಿಸಿ ಅಧ್ಯಕ್ಷೆ  ಸೋನಿಯಾ ಗಾಂಧಿಗೆ ಇಡಿ ಸಮನ್ಸ್ ಜಾರಿ ಮಾಡಿದ್ದು ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ.

ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ. ಬೆಂಗಳೂರಿನಲ್ಲೂ ಕಾಂಗ್ರೆಸ್ ನಾಯಕರು ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಪೊಲೀಸರು ಇಂದು ಯಾವುದೇ ರ್ಯಾಲಿಗೆ ಅವಕಾಶ ನೀಡಿಲ್ಲ. ಫ್ರೀಡಂ ಪಾರ್ಕ್​ನಲ್ಲಿ ಮಾತ್ರ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಗಿದೆ.

ಸಂಸತ್ ನಲ್ಲೂ  ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ. ಲೋಕಸಭೆ ರಾಜ್ಯಸಭೆಯಲ್ಲಿ ಧರಣಿ ನಡೆಸಲು ಕಾಂಗ್ರೆಸ್ ನಿರ್ಧಾರ  ಮಾಡಿದ್ದು, ನಂತರ ದೆಹಲಿಯ ಎಐಸಿಸಿ ಕಚೇರಿಯಿಂದ ಇಡಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ. ಧರಣಿ ಹಿನ್ನೆಲೆಯಲ್ಲಿ ಎಐಸಿಸಿ ಕಚೇರಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕಚೇರಿ ಬಳಿ ಹೆಚ್ಚುವರಿ ಪೊಲೀಸ್ ನಿಯೋಜನೆ ಮಾಡಲಾಗಿದೆ.

Key words: Congress – protest -against – ED- inquiry- Sonia Gandhi

website developers in mysore