ಕಾಂಗ್ರೆಸ್ ನವರು ನನ್ನನ್ನೇ ರೇಪ್ ಮಾಡುತ್ತಿದ್ದಾರೆ- ಬೇಜವಾಬ್ದಾರಿ ಹೇಳಿಕೆ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ.

Promotion

ಬೆಂಗಳೂರು,ಆಗಸ್ಟ್,26,2021(www.justkannada.in):  ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡುವ ವೇಳೆ ಗೃಹ ಸಚಿವ ಅರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕರ್ನಾಟಕ ಗೃಹಸಚಿವರನ್ನ ಕಾಂಗ್ರೆಸ್ ನವರು ರೇಪ್ ಮಾಡುತ್ತಿದ್ದಾರೆ. ಕಾಂಗ್ರೆಸ್ ನವರು ನನ್ನನ್ನೇ ರೇಪ್ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಪ್ರಕರಣದಲ್ಲಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ. ರೇಪ್ ಆಗಿದ್ದು ಅಲ್ಲಿ. ಆದರೆ ನನ್ನನ್ನೇ ಕಾಂಗ್ರೆಸ್ ನವರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಯುವಕ ಯುವತಿ ಸಂಜೆ 7.30ಕ್ಕೆ  ನಿರ್ಜನ ಪ್ರದೇಶಕ್ಕೆ ಹೊಗಿದ್ದಾರೆ. ಅಷ್ಟೊತ್ತಿಗೆ ಅಲ್ಲಿಗೆ ಹೋಗಬಾರದಿತ್ತು ಎಂದು  ಸಚಿವ ಅರಗ ಜ್ಞಾನೇಂದ್ರ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

Key words: Congress- raping –me-Home Minister -Araga Jnanendra – irresponsible- statement.