ಗ್ರಾಪಂ ಚುನಾವಣೆ ಮುಂದೂಡಿಕೆ ನಿರ್ಧಾರಕ್ಕೆ ಎಚ್.ಕೆ.ಪಾಟೀಲ್ ಅಸಮಾಧಾನ

Promotion

ಬೆಂಗಳೂರು, ಮೇ 31, 2020 (www.justkannada.in): ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿಕೆ ಸರಿಯಲ್ಲ ಎಂದು ಕಾಂಗ್ರೆಸ್ ನಾಯಕ ಹೆಚ್ ಕೆ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಆಯೋಗದ ನಡೆಗೆ ಕಾಂಗ್ರೆಸ್ ತೀವ್ರ ಅಸಮಾಧಾನಗೊಂಡಿದೆ. ಕೋವಿಡ್ ನೆಪ ಹೇಳಿ ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿಕೆ ಸರಿಯಲ್ಲ. ಜನಜೀವನ, ಚಟುವಟಿಕೆಗಳು ಹಿಂದಿನಂತೆಯೇ ಆರಂಭವಾಗಿದೆ. ಲಾಕ್ ಡೌನ್ ತೆರವುಗೊಳಿಸಲಾಗಿದೆ. ಹೀಗಾಗಿ ನೆಪವೊಡ್ಡಿ ಚುನಾವಣೆ ಮುಂದೂಡುವುದು ಸರಿಯಲ್ಲ ಎಂದು ಎಚ್ ಕೆ ಪಾಟೀಲ್ ಹೇಳಿದ್ದಾರೆ.

ಚುನಾವಣೆ ನಡೆಸದೆ ನಾಮನಿರ್ದೇಶನ ಮಾಡಲು ಸಾಧ್ಯವಿಲ್ಲ. ಸಂವಿಧಾನದಲ್ಲಿ ಇದಕ್ಕೆ ಅವಕಾಶವಿಲ್ಲ, ಪಂಚಾಯತ್ ರಾಜ್ ಅಧಿನಿಯಮದಲ್ಲೂ ಅವಕಾಶವಿಲ್ಲ. ಹೀಗಿದ್ದರೂ ಚುನಾವಣೆ ಮುಂದೂಡಲಾಗಿದೆ, ಇದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.