ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನಿಲುವು: ದೇಶದ ಜನರ ಕ್ಷಮೆ ಕೇಳುವಂತೆ ಆಗ್ರಹಿಸಿದ ಸಿ.ಟಿ ರವಿ…

ಬೆಂಗಳೂರು,ಮೇ,22,2021(www.justkannada.in):  ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನಿಲುವು ತಾಳಿದೆ. ಆಗ ಲೇವಡಿ, ಅಪಪ್ರಚಾರ ಮಾಡಿದ್ದ ಕಾಂಗ್ರೆಸ್ ಈಗ ಮೊಸಳೆ ಕಣ್ಣೀರು ಹಾಕುತ್ತಾ ಕೊರೋನಾ ಲಸಿಕೆ ಕೇಳುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಿಡಿಕಾರಿದ್ದಾರೆ.jk

ಮಾಧ್ಯಮಗಳ ಜತೆ ಇಂದು ಮಾತನಾಡಿದ ಮಾಜಿ ಸಚಿವ ಸಿ.ಟಿ ರವಿ, ಕೊರೋನಾ ಲಸಿಕೆ ವಿರೋಧಿಸಿಲ್ಲ ಅಂತಾ ಡಿ.ಕೆ ಶಿವಕುಮಾರ್, ಸಿದ್ಧರಾಮಯ್ಯ ಹೇಳುತ್ತಾರೆ. ಆದರೆ ನಮ್ಮ ಬಳಿ ಲಸಿಕೆ ವಿರೋಧಿ ಹೇಳಿಕೆಗಳು, ಟ್ವಿಟ್ಟರ್ ಗಳು ಸಾಕ್ಷಿಯಾಗಿ ಇವೆ. ಲಸಿಕೆ ವಿರೋಧಿಸುವವರು ದೇಶದ ಜನರ ಬಳಿ ಕ್ಷಮೆ ಕೇಳಲಿ ಎಂದು ಆಗ್ರಹಿಸಿದರು.

ಪಿಎಂ ಕೇರ್ ಗೆ ಕಾಂಗ್ರೆಸ್ ಒಂದೇ ಒಂದು ರೂಪಾಯಿಯನ್ನೂ  ನೀಡಿಲ್ಲ. ಎತ್ತಿನ ಗಾಡಿಯಿಂದ ರಾಜಕೀಯ ಆರಂಭಿಸಿದ ಕಾಂಗ್ರೆಸ್ ನ ಕೆಲವು ಮುಖಂಡರು ಈಗ ಖಾಸಗಿ ಜೆಟ್ ನಲ್ಲಿ ಹಾರಾಟ ನಡೆಸುವಷ್ಟು ಶ್ರೀಮಂತರಾಗಿದ್ದಾರೆ. ಆದರೆ, ಸ್ವಂತ ನೆಲೆಯಲ್ಲಿ ದೇಶಕ್ಕೆ ಮತ್ತು ದೇಶದ ಜನತೆಗೆ ಸಹಾಯ ಮಾಡಿಲ್ಲ ಎಂದು  ಸಿ.ಟಿ ರವಿ ವಾಗ್ದಾಳಿ ನಡೆಸಿದರು.congress-vaccine-issue-bjp-ct-ravi

ಮುಂದಿನ ದಿನಗಳಲ್ಲಿ ಆಕ್ಸಿಜನ್ ಕೊರತೆ ಯಾವತ್ತೂ ಕಾಡದಂತೆ ಉತ್ಪಾದನೆ- ವಿತರಣಾ ಜಾಲವನ್ನು ಪ್ರಧಾನಿಯವರು ಬಲಪಡಿಸಿದ್ದಾರೆ. ಕೋವಿಡ್ ಸಂಕಷ್ಟದ ವಿಚಾರ ಮಾತ್ರವಲ್ಲದೆ, ಅಪಪ್ರಚಾರದ ವಿರುದ್ಧ ನಾವು ಗೆಲ್ಲಲಿದ್ದೇವೆ. ಕಾಂಗ್ರೆಸ್ ಮುಖಂಡರು ಟೂಲ್ ಕಿಟ್ ಮೂಲಕ ಅಪಪ್ರಚಾರ ಮಾಡಿದ್ದಾರೆ ಎಂದು ಸಿ.ಟಿ ರವಿ ಕಿಡಿಕಾರಿದರು.

Key words: Congress – vaccine issue-bjp-CT Ravi