ಸಿದ್ಧರಾಮಯ್ಯರ ಹತ್ಯೆಗೆ ಸಂಚು ರೂಪಿಸಿದ್ಧರು- ನಿಡುಮಾಮಿಡಿ ಶ್ರೀ ವೀರಭದ್ರ ಚೆನ್ನಮಲ್ಲ ಮಹಾಸ್ವಾಮೀಜಿ ಹೇಳಿಕೆ.

Promotion

ಚಿಕ್ಕಬಳ್ಳಾಪುರ,ಸೆಪ್ಟಂಬರ್,24,2022(www.justkannada.in):  ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು  ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂದು ನಿಡುಮಾಮಿಡಿ ಮಹಾಸಂಸ್ಥಾನದ ಶ್ರೀ ವೀರಭದ್ರ ಚೆನ್ನಮಲ್ಲ ಮಹಾಸ್ವಾಮೀಜಿ  ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಗೌರಿಬಿದನೂರಿನಲ್ಲಿ ಮಾತನಾಡಿದ ಶ್ರೀ ವೀರಭದ್ರ ಚೆನ್ನಮಲ್ಲ ಮಹಾಸ್ವಾಮೀಜಿ  ಅವರು, ಫ್ಯಾಸಿಸ್ಟ್ ಸಂಸ್ಕೃತಿಯ ಜನರು ಸಂಶೋಧಕ ಡಾ. ಎಂ.ಎಂ ಕಲಬುರ್ಗಿ, ಪತ್ರಕರ್ತೆ ಗೌರಿ ಲಂಕೇಶರ್​ ಅವರನ್ನು ಹತ್ಯೆ ಮಾಡಿದ ಮಾದರಿಯಲ್ಲೇ ಇನ್ನೂ ಹಲವರ ಹತ್ಯೆಗೆ ಸಂಚು ರೂಪಿಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು  ಹತ್ಯೆ ಮಾಡಲು ಸಂಚು ರೂಪಿಸಿದ್ದರು. ಆದರೆ ಜೀವ ಕಾಯುವುದಕ್ಕೆ ಮೇಲೆ ಇದ್ದಾನೆ ಎಂದು  ಹೇಳಿದ್ದಾರೆ.

ಯಾವ ಪಕ್ಷದಿಂದಲೂ ಭ್ರಷ್ಟಾಚಾರ ನಿವಾರಿಸಲು ಆಗುವುದಿಲ್ಲ. ಈ ಬಾರಿಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸೇರಿಸಿಕೊಳ್ಳಿ. ಗಣನೀಯವಾಗಿ ಭ್ರಷ್ಟಚಾರ ತಗ್ಗಿಸುವುದಾಗಿ ಭರವಸೆ ನೀಡಿ. ಆಗಿರುವ ಅನ್ಯಾಯ ಸರಿಪಡಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿ. ಜನ ಖಂಡಿತವಾಗಿ ಕಾಂಗ್ರೇಸ್​​ನ್ನು ಸ್ವಾಗತಿಸುತ್ತಾರೆ ಎಂದು ಸ್ವಾಮೀಹಿಗಳು ತಿಳಿಸಿದರು.

Key words: conspiracy – kill- Siddaramaiah-Sri Veerabhadra Chennamalla Mahaswamiji