ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ಅನರ್ಹತೆ ಹಿಂದೆ ಷಡ್ಯಂತ್ರ- ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ.

Promotion

ನವದೆಹಲಿ,ಮಾರ್ಚ್,24,2023(www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವ ಹಿಂದೆ ಷಡ್ಯಂತ್ರ ಅಡಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ಅನರ್ಹತೆ ಮೂಲಕ ವ್ಯವಸ್ಥಿತವಾಗಿ ಸತ್ಯ ಹೇಳುವವರ ಬಾಯಿ ಮುಚ್ಚಿಸಲು ಕೇಂದ್ರಸರ್ಕಾರ ಯತ್ನಿಸುತ್ತಿದೆ. ಸತ್ಯ ಹೇಳಿದ್ದಕ್ಕೆ ರಾಹುಲ್ ಗಾಂಧಿ ಸದಸ್ಯತ್ವ ಅನರ್ಹಗೊಳಿಸಿದ್ದಾರೆ. ಆದರೆ ನಾವು ಜೈಲಿಗೆ ಹೋಗಲು ಸಿದ‍್ಧರಿದ್ದೇವೆ. ಪ್ರಜಾಪ್ರಭುತ್ವ ರಕ್ಷಣೆಗಾಗಿ ಹೋರಾಡುತ್ತೇವೆ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ 2 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ ಹಿನ್ನೆಲೆ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಅನರ್ಹಗೊಳಿಸಲಾಗಿದೆ.

Key words: Conspiracy –Rahul Gandhi- Lok Sabha -membership -disqualification -Mallikarjuna Kharge