ಸಲ್ಮಾನ್ ಖಾನ್ ಹತ್ಯೆಗೆ ಸಂಚು: ಹೊರ ಬಿದ್ದ ಅಸಲಿ ಕಾರಣ!

kannada t-shirts

ಬೆಂಗಳೂರು, ಜುಲೈ 13, 2022 (www.justkannada.in): ನಟ ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡಲು ಈತ ಸಂಚು ರೂಪಿಸಿದ ವಿಚಾರವನ್ನು ಬಿಚ್ಚಿಟ್ಟಿದ್ದು,.ಇದಕ್ಕಾಗಿ ಆತ 4 ಲಕ್ಷ ರೂಪಾಯಿ ಗನ್ ಕೂಡ ಖರೀದಿ ಮಾಡಿದ್ದ ವಿಚಾರ ಬೆಳಕಿಗೆ ಬಂದಿದೆ.

ಸಲ್ಮಾನ್ ಖಾನ್ ಒಂದು ಕೃಷ್ಣ ಮೃಗವನ್ನು ಬೇಟೆಯಾಡಿದ್ದರು. ಈ ಪ್ರಕರಣ ಇನ್ನೂ ಕೋರ್ಟ್​ನಲ್ಲಿದೆ. ಈ ಪ್ರಕರಣದಲ್ಲಿ ಹಗೆ ತೀರಿಸಿಕೊಳ್ಳಲು ಲಾರೆನ್ಸ್ ಸಂಚು ರೂಪಿಸಿದ್ದ. ಸದ್ಯ ೀ ಗ್ಯಾಂಗ್​​ಸ್ಟರ್​ ಲಾರೆನ್ಸ್ ಬಿಷ್ಣೋಯ್ ಪೊಲೀಸರ ವಶದಲ್ಲಿದ್ದಾನೆ.

ಬಿಷ್ಣೋಯ್ ಸಮುದಾಯದವರು ಪ್ರಕೃತಿ ಆರಾಧಕರು. ವನ್ಯಜೀವಿ ಸಂರಕ್ಷಣೆಗಾಗಿ ಅವರು ಪ್ರಾಣವನ್ನು ಬೇಕಾದರೂ ನೀಡುತ್ತಾರೆ. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ.

ಈ ಪ್ರಾಣಿಯನ್ನು ಕೊಲ್ಲುವುದನ್ನು ಅಥವಾ ಮರವನ್ನು ಕಡಿಯುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ ಎನ್ನಲಾಗಿದೆ.

website developers in mysore