ಮುಂದಿನ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದಲೇ ಸ್ಪರ್ಧೆ: ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ

Promotion

ಬೆಂಗಳೂರು, ಅಕ್ಟೋಬರ್ 23, 2022 (www.justkannada.in): ಮುಂದಿನ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಚನ್ನಪಟ್ಟಣ ಕ್ಷೇತ್ರ ಬಿಟ್ಟು ಹೋಗುವುದಿಲ್ಲ. ಅಲ್ಲಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.

ಹಲವು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವಂತೆ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಆದರೆ ನಾನು ಚನ್ನಪಟ್ಟಣದಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಎಚ್ಡಿಕೆ ಹೇಳಿದ್ದಾರೆ.

ನಾನು ಹೆದರಿ ಪಲಾಯನ ಮಾಡುವುದಿಲ್ಲ. ಎಂಎಲ್‌ಸಿಗೆ ಅನುದಾನ ಕೊಟ್ಟು ಕ್ಷೇತ್ರದ ಜನರ ಓಲೈಕೆ ಮಾಡಬಹುದು ಅಂತ ಬೊಮ್ಮಾಯಿ ಅಂದ್ಕೊಂಡಿದ್ದಾರೆ. ಆದರೆ ನನ್ನ ಕ್ಷೇತ್ರದ ಜನರು ಆಮಿಷಕ್ಕೆ ಬಲಿಯಾಗಲ್ಲ ಎಂದು ತಿರುಗೇಟು ನೀಡಿದ್ದಾರೆ.