ಮುಂದಿನ ವಿಧಾನಸಭೆ ಚುನಾವಣೆಗೆ ಒಂದು ಕ್ಷೇತ್ರದಿಂದ ಮಾತ್ರ ಸ್ಪರ್ಧೆ- ಮಾಜಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ.

Promotion

ಮೈಸೂರು,ನವೆಂಬರ್,18,2022(www.justkannada.in):  ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಒಂದು ಕ್ಷೇತ್ರದಿಂದ ಮಾತ್ರ ಸ್ಪರ್ಧಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ  ಸಿದ್ಧರಾಮಯ್ಯ, ಕೋಲಾರ, ಬಾದಾಮಿ, ವರುಣಾಕ್ಷೇತ್ರ ಶಾರ್ಟ್ ​​ಲಿಸ್ಟ್​​ನಲ್ಲಿದೆ. ಅಂತಿಮವಾಗಿ ಎಲ್ಲಿ ಸ್ಪರ್ಧಿಸಬೇಕೆಂದು ವರಿಷ್ಠರು ನಿರ್ಧರಿಸುತ್ತಾರೆ. ಚುನಾವಣೆ ದಿನಾಂಕ ಘೋಷಣೆ ಬಳಿಕ ಸ್ಪರ್ಧಿಸುವ ಕ್ಷೇತ್ರ ಹೇಳುತ್ತೇನೆ ಎಂದು ತಿಳಿಸಿದರು.

ಹಾಗೆಯೇ ಸೋಲಿನ ಭಯದಲ್ಲಿ ಸರ್ವೆ ಮಾಡುತ್ತಿದ್ದಾರೆ ಎನ್ನುತ್ತಾರೆ. ಆದರೆ ಸರ್ವೆ ಮಾಡಿಸಿದರೆ ತಪ್ಪೇನು ? ಪ್ರಧಾನಿ ನರೇಂದ್ರ ಮೋದಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿರಲಿಲ್ವಾ? ಮೋದಿ ಸರ್ವೆ ಮಾಡಿಸಿರಲಿಲ್ವಾ ? ಸುರಕ್ಷಿತ ಕ್ಷೇತ್ರಕ್ಕಾಗಿ ಸರ್ವೆ ಮಾಡಿಸಿರುತ್ತಾರೆ. ಆದರೆ ನಾನು ಸರ್ವೆ ಮಾಡಿಸಿಲ್ಲ, ಪಕ್ಷವೂ ಸರ್ವೆ ಮಾಡಿಸಿಲ್ಲ ಎಂದು  ಸಿದ್ಧರಾಮಯ್ಯ ತಿಳಿಸಿದರು.

Key words: Contest – next- assembly -election – only –one- constituency-Siddaramaiah