ಕೊರೋನಾ ನಿಯಂತ್ರಣಕ್ಕೆ ಬರುವವರೆಗೂ ಬಂದ್ ಮುಂದುವರಿಕೆ ಅನಿವಾರ್ಯ- ಆರೋಗ್ಯ ಸಚಿವ ಶ್ರೀರಾಮುಲು…

Promotion

ಮಂಗಳೂರು,ಮಾ,17,2020(www.justkannada.in):  ದೇಶದಲ್ಲಿ ಆತಂಕ ಸೃಷ್ಠಿಸಿರುವ ಮಹಾಮಾರಿ ಕೊರೋನಾ ನಿಯಂತ್ರಣಕ್ಕೆ ಬರುವವರೆಗೂ ಬಂದ್ ಮುಂದುವರೆಯುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಈ ಬಗ್ಗೆ ಇಂದು ಮಂಗಳೂರಿನಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು, ಕೊರೋನಾ ವೈರಸ್ ನಿಯಂತ್ರಣಕ್ಕೆ ಬರುವವರೆಗೂ ಬಂದ್ ಅನಿವಾರ್ಯವಾಗಿದೆ . ಕರ್ನಾಟಕ ಬಂದ್ ಮುಂದುವರಿಕೆ ಅನಿವಾರ್ಯವಾಗಿದೆ. ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರವು ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಒಂದು ವೇಳೆ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದಿದ್ದರೆ ಮತ್ತಷ್ಟು ದಿನ ಕರ್ನಾಟಕ ಬಂದ್ ಮುಂದುವರಿಕೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು , ಈಗಾಗಲೇ ಕಲಬುರಗಿಯಲ್ಲಿ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಹೀಗಾಗಿ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಬರುವವರೆಗೂ ಕರ್ನಾಟಕ ಬಂದ್ ಅನಿವಾರ್ಯ ಎಂದು ಶ್ರೀರಾಮುಲು ಹೇಳಿದ್ದಾರೆ.

Key words: Continuation – Bandh  -inevitable – Corona virus- control- Health Minister -Sriramulu.