ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆಯ ಆರ್ಭಟ ಮುಂದುವರಿಕೆ

ಬೆಂಗಳೂರು, ಜುಲೈ 20, 2021 (www.justkannada.in): ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆಯ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿಎಸ್​ ಪಾಟೀಲ್ ಈ ಕುರಿತು ಮಾಹಿತಿ ನೀಡಿದ್ದು,  ಕರ್ನಾಟಕದಲ್ಲಿ ಜುಲೈ 19ರಿಂದ 23ರವರೆಗೆ ಮಳೆ ಸುರಿಯಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮನೆಗಳು ಜಲಾವೃತಗೊಂಡಿವೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ.

ಬೆಳಗಾವಿ, ಹಾವೇರಿ, ಧಾರವಾಡ, ಗದಗ, ಬೀದರ್, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಜು. 22 ಮತ್ತು 23ರಂದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ENGLISH SUMMARY…..

Rains will continue for 4 more days in the State
Bengaluru, July 20, 2021 (www.justkannada.in): The India Meteorological Department has informed that the rains may continue in the State for four more days.
C.S. Patil, Director, India Meteorological Department in his information has stated that the rains may continue to lash from July 19 to 23. The coastal areas in the state are witnessing incessant rains inundating several houses in the low-lying areas.
Dakshin Kannada and Udupi Districts may witness huge rainfall along with lightning. As a result yellow alert has been announced.
A yellow alert has been announced also in other districts including Belagavi, Haveri, Dharwad, Gadag, Bidar, Kalaburagi and Yadgir districts.
Keywords: rainfall/ four more days/ coastal areas/ state