ಬ್ಲ್ಯಾಕ್ ಫಂಗಸ್ ನಿಯಂತ್ರಣಕ್ಕೆ ಕ್ರಮ: ಸೋಂಕಿನಿಂದ ಬಳಲುತ್ತಿರುವವರಿಗೆ ಉಚಿತ ಚಿಕಿತ್ಸೆ -ಸಚಿವ ಡಾ.ಕೆ.ಸುಧಾಕರ್…

ಹುಬ್ಬಳ್ಳಿ,ಮೇ,22,2021(www.justkannada.in): ತಜ್ಞರ ವರದಿ ಆಧರಿಸಿ ಬ್ಲ್ಯಾಕ್ ಫಂಗಸ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಬ್ಲ್ಯಾಕ್ ಫಂಗಸ್ ನಿಂದ ಬಳಲುತ್ತಿರುವವರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.jk

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಸಚಿವ ಸುಧಾಕರ್,  ಬ್ಲ್ಯಾಕ್ ಫಂಗಸ್ ನಿಂದ ಸಾವಿನ ಪ್ರಮಾಣ ಜಾಸ್ತಿ ಆಗಿಲ್ಲ. ವರ್ಷಕ್ಕೆ 10 ಜನರಿಗೆ ಬ್ಲಾಕ್ ಫಂಗಸ್ ಬರುತ್ತಿತ್ತು. ಆದರೆ ಈಗ 250 ಜನ ಸೋಂಕಿತರು ರಾಜ್ಯದಲ್ಲಿ ಇದ್ದಾರೆ. ಹೀಗಾಗಿ ಅವರಿಗೆಲ್ಲ ಎಷ್ಟು ಔಷಧಿ ಬೇಕೋ ಇವೆಲ್ಲವನ್ನು ಸರ್ಕಾರ ನೀಡಲಿದೆ ಎಂದರು.control-action-block-fungus-free-treatment-minister-sudhakar

ಬ್ಲ್ಯಾಕ್ ಫಂಗಸ್ ಹಿನ್ನೆಲೆ ಅಗತ್ಯ ಔಷಧ  ವಿತರಿಸುವುದಾಗಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡರು ಹೇಳಿದ್ದಾರೆ. ಬ್ಲ್ಯಾಕ್ ಫಂಗಸ್ ನಿಂದ ಬಳಲುತ್ತಿರುವ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡುತ್ತೇವೆ. ಇದರಲ್ಲಿ ಬ್ಲ್ಯಾಕ್, ವೈಟ್ ಅಂತೇನಿಲ್ಲ. ಅದು ಕೇವಲ ಫಂಗಸ್ ಅಷ್ಟೇ.. ಬ್ಲ್ಯಾಕ್ ಫಂಗಸ್ ಸಲುವಾಗಿ ಈಗಾಗಲೇ ತಜ್ಞರ ಸಮಿತಿ ರಚನೆ ಮಾಡಿದ್ದು, ಸಮಿತಿ ವರದಿ ನೀಡಿದೆ.  ಹೆಚ್ಚು ದಿನ ಐಸಿಯು ನಲ್ಲಿದ್ದವರು, ಆಕ್ಸಿಜನ್ ಪಡೆದವರಲ್ಲಿ ಈ ಫಂಗಸ್ ಕಾಣಿಸಿಕೊಂಡಿದೆ ಎಂದು ಡಾಕೆ.ಸುಧಾಕರ್ ತಿಳಿಸಿದರು.

Key words: Control – Action – block fungus- Free Treatment-Minister -sudhakar