ವಿಧಾನಪರಿಷತ್ ನಲ್ಲಿ ಮಂಡನೆಯಾಗದ ಮತಾಂತರ ನಿಷೇಧ ವಿಧೇಯಕ.

ಬೆಳಗಾವಿ,ಡಿಸೆಂಬರ್,24,2021(www.justkannada.in): ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಮತಾಂತರ ನಿಷೇಧ ಕಾಯ್ದೆ ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದು ಈ ಮಧ್ಯೆ ಮುಂದಿನ ಅಧಿವೇಶನದಲ್ಲಿ ವಿಧಾನ ಪರಿಷತ್ ನಲ್ಲಿ ವಿಧೇಯಕ ಮಂಡನೆ ಮಾಡಲು ಸರ್ಕಾರ ನಿರ್ಧರಿಸಿದೆ.

ಬೆಳಗಾವಿ ಚಳಿಗಾಲದ ಅಧಿವೇಶನ ಇಂದು ಕೊನೆಗೊಂಡಿದ್ದು, ಉಭಯ ಸದನಗಳು ಅನಿರ್ಧಿಷ್ಟಾವಧಿಗೆ ಮುಂದೂಡಿಕೆಯಾದವು.  ಈ ಮಧ್ಯೆ ವಿಧಾನಸಭೆಯಲ್ಲಿ ಆಡಳಿತರೂಢ ಬಿಜೆಪಿಗೆ ಸಂಖ್ಯಾಬಲವಿದ್ಧ ಹಿನ್ನೆಲೆ ಮತಾಂತರ ನಿಷೇಧ ವಿಧೇಯಕ ಅಂಗೀಕಾರವಾಯಿತು.

ಆದರೆ ಈ ಕಾಯ್ದೆಗೆ ವಿಪಕ್ಷಗಳಾದ ಕಾಂಗ್ರೆಸ್ ಜೆಡಿಎಸ್ ವಿರೋಧ ವ್ಯಕ್ತಪಡಿಸಿದೆ. ಹೀಗಾಗಿ ವಿಧಾನಪರಿಷತ್ ನಲ್ಲಿ ಬಿಜೆಪಿಗೆ ಸಂಖ್ಯಾಬಲವಿಲ್ಲದ ಹಿನ್ನೆಲೆ ಮುಂದಿನ ಅಧಿವೇಶನದಲ್ಲಿ ಮತಾಂತರ ಕಾಯ್ದೆ ಮಂಡನೆಗೆ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಮಾತನಾಡಿದ ಪರಿಷತ್ ಸಭಾನಾಯಕ ಕೋಟಾ ಶ್ರೀನಿವಾಸ್ ಪೂಜಾರಿ, ಮುಂದಿನ ಅಧೀವೇಶನದಲ್ಲಿ  ವಿಧೇಯಕವನ್ನ ಮಂಡಿಸುತ್ತೇವೆ. ಮುಂದಿನ ಅಧಿವೇಶನದಲ್ಲಿ ಅಂಗೀಕಾರಕ್ಕೆ ತೀರ್ಮಾನ ಮಾಡಲಾಗಿದೆ ಎಂದಿದ್ದಾರೆ.

Key words: conversion prohibition act-ho -not present – legislative council