ಮತಾಂತರ ನಿಷೇಧ ಕಾಯ್ದೆ ಜಾರಿ ವಿಚಾರ: ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯಿಸಿದ್ದು ಹೀಗೆ.

Promotion

ಮೈಸೂರು,ಡಿಸೆಂಬರ್,27,2021(www.justkannada.in): ಮತಾಂತರ ನಿಷೇಧ ಕಾಯ್ದೆ ಜಾರಿಗೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ  ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಶಾಸಕ ತನ್ವೀರ್ ಸೇಠ್ ಹೇಳಿದ್ದಿಷ್ಟು.

ಮತಾಂತರ ನಿಷೇಧಕ್ಕಿಂತ ಪಕ್ಷಾಂತರ ಅಪಾಯಕಾರಿ. ಪಕ್ಷಾಂತರಿಗಳಿಂದ ನಡೆಯುತ್ತಿರುವ ಸರ್ಕಾರಕ್ಕೆ ಕಾಯ್ದೆ ಜಾರಿಗೆ ತರೋ ನೈತಿಕತೆ ಇಲ್ಲ. ಯಾರು ಯಾವ ಧರ್ಮಕ್ಕೆ ಬೇಕಾದ್ರೂ ಹೋಗಬಹುದು. ನಮ್ಮದು ಜಾತ್ಯಾತೀತ ರಾಷ್ಟ್ರ. ನಮಗೆ ಸಂವಿಧಾನ ಎಲ್ಲಾ ರೀತಿಯ ಧಾರ್ಮಿಕ ಸ್ವಾತಂತ್ರ್ಯ ನೀಡಿದೆ. ಧಾರ್ಮಿಕ ಸ್ವಾತಂತ್ರ್ಯ ಪ್ರತಿಯೊಬ್ಬ ಪ್ರಜೆಯ ಹಕ್ಕು.  ಮತಾಂತರ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ ಆಗಿದೆ. ಆದರೆ ವಿಧಾನ ಪರಿಷತ್ ನಲ್ಲಿ ಅಂಗೀಕಾರ ಆಗಿಲ್ಲ. ಒಂದು ವೇಳೆ ಅಂಗೀಕಾರ ಆದ್ರೂ ಅದರ ವಿರುದ್ಧ ಹೋರಾಟ ಮಾಡುತ್ತೇವೆ. ಕೃಷಿ ಕಾಯ್ದೆಗಳ ವಿರುದ್ಧ ವಿರೋಧ ವ್ಯಕ್ತವಾದ ಹಿನ್ನೆಲೆ ಕೇಂದ್ರ ಸರ್ಕಾರ ಕಾಯ್ದೆಗಳನ್ನ ವಾಪಸ್ ಪಡೆಯಿತು. ಅದೇ ಮಾದರಿಯಲ್ಲಿ ಮತಾಂತರ ಕಾಯ್ದೆ ವಿರುದ್ಧ ಹೋರಾಟ ಮಾಡ್ತೀವಿ ಎಂದರು.start-oxygen-bus-service-mysore-mla-tanvir-sait-letter-incharge-minister

ಎನ್ ಅರ್ ಕ್ಷೇತ್ರದಲ್ಲಿ ರಸ್ತೆಗಳು ಹದಗೆಟ್ಟ ವಿಚಾರ ಕುರಿತು ಮಾತನಾಡಿದ ಅವರು, ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸುವೆ. ನಗರ ಪಾಲಿಕೆ, ಲೋಕೋಪಯೋಗಿ, ಮುಡಾ ಅಧಿಕಾರಿಗಳ ಸಭೆ ಕರೆದಿದ್ದೇನೆ. ಸರ್ಕಾರದಿಂದ ನಮಗೆ ಯಾವುದೇ ಅನುದಾನ ಬಂದಿಲ್ಲ. ಇದೆಲ್ಲಾ ಸ್ಥಳೀಯ ಸಂಸ್ಥೆಗಳಿಂದಲೇ ಅಭಿವೃದ್ಧಿ ಆಗಬೇಕು. ನಮಗೂ ಕೂಡ ಅನುದಾನದ ಕೊರತೆ ಇದೆ. ಅಕಾಲಿಕ ಮಳೆಯಿಂದಾಗಿ ರಸ್ತೆ  ಸಮಸ್ಯೆ ಹೆಚ್ಚಾಗಿದೆ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದರು.

Key words: Conversion Prohibition Act-MLA-Tanveer Sait-mysore