ಕುಕ್ಕರ್ ಹಾಗೂ ಐರನ್ ಬಾಕ್ಸ್ ಹಂಚಿಕೆ ವಿಚಾರ: ಯತೀಂದ್ರ ಸಿದ‍್ಧರಾಮಯ್ಯ ಸ್ಪಷ್ಟನೆ.

Promotion

ಮೈಸೂರು,ಸೆಪ್ಟಂಬರ್,22,2023(www.justkannada.in): ಮಡಿವಾಳ ಸಮುದಾಯಕ್ಕೆ ಕುಕ್ಕರ್ ಹಾಗೂ ಐರನ್ ಬಾಕ್ಸ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಯತೀಂದ್ರ ಸಿದ್ಧರಾಮಯ್ಯ,  ನಾನು ಹೇಳಿರುವುದೇ ಒಂದು ಮಾಧ್ಯಮಗಳು ತೋರಿಸುತ್ತಿರುವುದೇ ಒಂದು. ನಾನು ಸಿದ್ದರಾಮಯ್ಯ ಚುನಾವಣೆಗೊಸ್ಕರ ಕುಕ್ಕರ ಕೊಟ್ಟಿದ್ದಾರೆ ಅಂತ ಎಲ್ಲೂ ಹೇಳಿಲ್ಲ. ಆದರೂ ನಾನು ಮಾತನಾಡುವಾಗ ಸರಿಯಾಗಿ ಮಾತನಾಡದೇ ಇರಬಹುದು. ನನ್ನ ಹೇಳಿಕೆ ಆ ರೀತಿಯ ಅರ್ಥವನ್ನೂ ಕೊಟ್ಟಿರಬಹುದು. ಆದರೆ ಈ ಘಟನೆ ನಡೆದಿರೋದು ಚುನಾವಣೆ ನೀತಿ ಸಂಹಿತೆಗೂ ಮುಂಚೆ. ಜನವರಿ 26 ರಂದು ಮಡಿವಾಳ ಸಂಘದ ರಾಜ್ಯಾಧ್ಯಕ್ಷ ನಂಜಪ್ಪ ಅವರ ಹುಟ್ಟುಹಬ್ಬದ ಪ್ರಯಕ್ತ ವಿತರಣೆ ಮಾಡಲಾಗಿದೆ. ನನ್ನ ತಂದೆ ಸ್ವತಃ ಕೈಯಿಂದ ಕೂಡ ಕೊಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇದರ ಬಗ್ಗೆ ನಾನು ಮಾತನಾಡಿದ್ದು. ಆದರೆ ಮಾಧ್ಯಮದಲ್ಲಿ ಚುನಾವಣೆಗಾಗಿ ಹಂಚಿಕೆ ಮಾಡಲಾಗಿದೆ ಎಂದು ಬರುತ್ತಿದೆ. ಆ ಕಾರ್ಯಕ್ರಮದ ವೀಡಿಯೋ, ಪೋಟೋಗಳೂ ಇವೆ. ನಮ್ಮ ತಂದೆ ಅವರ ಕೈಯಿಂದ ದುಡ್ಡುಕೊಟ್ಟು ಎಲ್ಲಿಯೂ ಹಂಚಿಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

Key words: Cooker – iron box – issue- Yatindra Siddaramaiah -clarified.