ಕೊರೋನಾ ಆತಂಕ ಹಿನ್ನೆಲೆ: ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ.

Promotion

ಬೆಂಗಳೂರು,ಡಿಸೆಂಬರ್,23,2022(www.justkannada.in):  ರಾಜ್ಯದಲ್ಲಿ ಕೊರೋನಾ  ಆತಂಕ ಶುರುವಾಗಿದ್ದು, ಈ ಮಧ್ಯೆ ಸರ್ಕಾರ ಮಾಸ್ಕ್ ಧರಿಸುವುದನ್ನ ಕಡ್ಡಾಯಗೊಳಿಸಿಲ್ಲ.ಆದರೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯಗೊಳಸಿ ಆದೇಶಿಸಲಾಗಿದೆ.

ಬೆಂಗಳೂರು ನಗರದಲ್ಲಿ ಮತ್ತೆ ಕೊರೊನಾ ಭೀತಿ ಹಿನ್ನಲೆಯಲ್ಲಿ  ಕೊವಿಡ್ ಮಾರ್ಗಸೂಚಿ ಪಾಲಿಸುವಂತೆ ಶಾಲೆಗಳಿಗೆ ಖಾಸಗಿ ಶಾಲಾ ಒಕ್ಕೂಟ ಸೂಚನೆ ನೀಡಿದೆ ಎನ್ನಲಾಗಿದೆ.  ಮಾಸ್ಕ್ ಕಡ್ಡಾಯಗೊಳಿಸಿ ಖಾಸಗಿ ಶಿಕ್ಷಣ ಮಂಡಳಿ ಆದೇಶಿಸಿದ್ದು, ವಿದ್ಯಾರ್ಥಿಗಳು, ಶಿಕ್ಷಕರು, ಶಾಲಾ ಸಿಬ್ಬಂದಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.

ಶಾಲೆಗಳಲ್ಲಿ ಸಾಮಾಜಿಕ ಅಂತರ ಪಾಲನೆ ಮಾಡುವುದು ಕಡ್ಡಾಯವಾಗಿದ್ದು, ನೆಗಡಿ, ಕೆಮ್ಮು, ಜ್ವರದಂತಹ ಲಕ್ಷಣ ಕಂಡು ಬಂದರೆ ಕೂಡಲೇ ಕೊರೋನಾ ಸೋಂಕು ತಪಾಸಣೆ ನಡೆಸಬೇಕು ಎಂದು ಸೂಚನೆ ನೀಡಿದೆ.

Key words: Corona-anxiety-Order – masks – private schools – Bengaluru