ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿಗೆ ವಕ್ಕರಿಸಿದ ಕೊರೋನಾ….

ಮೈಸೂರು,ಜು,7,2020(www,justkannada.in):  ಮೈಸೂರು ಜಿಲ್ಲೆಯಲ್ಲಿ ರಣಕೇಕೆ ಹಾಕುತ್ತಿರುವ ಮಹಾಮಾರಿ ಕೊರೋನಾ ಇದೀಗ ಮೈಸೂರು ಮಹಾನಗರ ಪಾಲಿಕೆಗೆ ಕಾಲಿಟ್ಟಿದೆ. ಇಲ್ಲಿನ ಪಾಲಿಕೆ ಸಿಬ್ಬಂದಿಗೆ ಕೊರೋನಾ ಸೋಂಕಿರುವುದು ದೃಢವಾಗಿದೆ.jk-logo-justkannada-logo

ಮೈಸೂರು ಪಾಲಿಕೆ ಹೆಲ್ತ್ ಸೆಕ್ಷನ್ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದ್ದು ಪಾಲಿಕೆ ಆರೋಗ್ಯ ವಿಭಾಗ ಸೀಲ್ ಡೌನ್ ಆಗುವ ಸಾಧ್ಯತೆ ಇದೆ. ಕೊರೋನಾ ವೈರಸ್ ದೃಢಪಟ್ಟ ಹಿನ್ನೆಲೆ ಪಾಲಿಕೆ ಸಿಬ್ಬಂದಿ ಔಷಧಿ ಸಿಂಪಡಣೆಗೆ ಮುಂದಾಗಿದ್ದಾರೆ.corona-attack-mysore-city-corporation-staff

ಪಾಲಿಕೆಗೂ ಮಹಾಮಾರಿ ಲಗ್ಗೆ ಇಟ್ಟ ಹಿನ್ನೆಲೆ ಪಾಲಿಕೆ ಸಿಬ್ಬಂದಿಯಲ್ಲಿ ಆತಂಕ ಹೆಚ್ಚಾಗಿದ್ದು, ಸೋಂಕಿತ ಸಿಬ್ಬಂದಿ ನಿಕಟ ಸಂಪರ್ಕದಲ್ಲಿದ್ದವರಿಗೆ ಹೋಂ ಕ್ವಾರಂಟೈನ್ ಮಾಡಲಾಗಿದೆ.

Key words: Corona-attack- mysore –city corporation- staff.