ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕೊರೋನಾ ಕಂಟ್ರೋಲ್ ತಪ್ಪುತ್ತಿದೆ- ಆತಂಕ ವ್ಯಕ್ತಪಡಿಸಿದ ಸಿಎಂ ಬಿಎಸ್ ಯಡಿಯೂರಪ್ಪ…

ಬೆಂಗಳೂರು,ಜು,9,2020(www.justkannada.in):  ರಾಜ್ಯದಲ್ಲಿ ಕೊರೋನಾ ಮಹಾಮಾರಿ ದಿನೇ ದಿನೇ ಅಬ್ಬರಿಸುತ್ತಿದ್ದು ಪ್ರತಿದಿನ ಸಾವಿರಕ್ಕೂ ಹೆಚ್ಚು ಕೇಸ್ ಗಳು ಕಂಡು ಬರುತ್ತಿವೆ. ಕೊರೋನಾ ಹೆಚ್ಚಳವಾಗುತ್ತಿರುವ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ ನೀಡಿದ್ದಾರೆ.jk-logo-justkannada-logo

ವಿಧಾನಸೌಧದಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕೊರೋನಾ ಕಂಟ್ರೋಲ್ ತಪ್ಪುತ್ತಿದೆ. ಪರಿಸ್ಥಿತಿ ಕೈ ಮೀರಿದ್ದು  ಅಂತಹ ಜಿಲ್ಲೆಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಕರೋನಾ ತಡೆಗಟ್ಟಲು ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ಇನ್ನು ಕೋವಿಡ್ ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಅಂಬುಲೆನ್ಸ್ ಬೇಕು. ಹೀಗಾಗಿ 280 ಆಂಬ್ಯುಲೆನ್ಸ್ ಖರೀದಿಸುವಂತೆ ಸೂಚನೆ ನೀಡಲಾಗಿದೆ 600 ಆಂಬ್ಯುಲೆನ್ಸ್ ವ್ಯವಸ್ಥೆಗೆ ಕ್ರಮ ಕೈಗೊಂಡಿದ್ದೇವೆ. ನಾಳೆ ಸುದ್ದಿಗೊಷ್ಠಿ ನಡೆಸಿ ಮಾಹಿತಿ ನೀಡುತ್ತೇನೆ. ಇಂದು ಸಂಜೆ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲಿಸುತ್ತೆನೆ ಎಂದು ಸಿಎಂ ಬಿಎಸ್ ವೈ ತಿಳಿಸಿದರು.corona-control-some-districts-cm-bs-yeddyurappa

ಕೇಂದ್ರ ತಂಡ ಬಂದು ರಾಜ್ಯದ ಕೊರೊನಾ ಪರಿಸ್ಥಿತಿಯನ್ನು ನೋಡಿಕೊಂಡು ಹೋಗಿದ್ದು, ಸರ್ಕಾರ ತೆಗೆದುಕೊಂಡಿರುವ ಕೆಲವು ನಿರ್ಧಾರಗಳಿಗೆ ಮೆಚ್ಚುಗೆ ಸೂಚಿಸಿದೆ. ಹಾಗೆ ಕೆಲವು ಮುನ್ನೇಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಲಹೆಗಳನ್ನು ನೀಡಿದೆ ಎಂದು ಸಿಎಂ ಬಿಎಸ್ ವೈ ತಿಳಿಸಿದರು.

Key words: Corona- Control -some -districts –CM- BS Yeddyurappa