ವೈದ್ಯರ ಸಲಹೆ ಮೇರೆಗೆ ಡಿಸಿಎಂ ಲಕ್ಷ್ಮಣ್ ಸವದಿ ಕ್ವಾರಂಟೈನ್…

Promotion

ಬೆಂಗಳೂರು,ಏಪ್ರಿಲ್,17,2021(www.justkannada.in): ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗುತ್ತಿದ್ದು ಈ ಮಧ್ಯೆ ಉಪಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಕೊರೋನಾ ಸೋಂಕು ತಗುಲಿದೆ.by,election,result,Afterwards,Rahul Gandhi,Lion,fox,Mouse,Will know,Minister,K.S.Eshwarappa

ಹೀಗಾಗಿ ಮುನ್ನೆಚ್ಚರಿಕೆ ಕ್ರಮಮಾಗಿ ಡಿಸಿಎಂ ಲಕ್ಷ್ಮಣ್ ಸವದಿ ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್ ಆಗಿದ್ದು ಈ ಕುರಿತು ಟ್ವಿಟ್ ಮಾಡಿರುವ ಅವರು,  ಬಸವಕಲ್ಯಾಣ ಉಪಚುನಾವಣೆಯ ಪ್ರಚಾರದಲ್ಲಿ ನಾನು ಕೆಲವು ದಿನಗಳ ಕಾಲ ತೊಡಗಿದ್ದ ಸಂದರ್ಭದಲ್ಲಿ ನನ್ನೊಂದಿಗೆ ಭಾಗವಹಿಸಿದ್ದ ಕೆಲವರಿಗೆ ಕೋವಿಡ್ ಸೋಂಕು ತಗುಲಿದ್ದು ಕಂಡುಬಂದಿದೆ. ಅಷ್ಟೇಅಲ್ಲ, ನನ್ನ ಗನ್‍ ಮ್ಯಾನ್‍ ಗೂ ಕೂಡಾ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.corona - DCM- Laxman Savadi -Quarantine - doctor's- advice.

ಈ ಹಿನ್ನೆಲೆಯಲ್ಲಿ ನಾನು ವೈದ್ಯರ ಸಲಹೆ ಪಡೆದಿದ್ದು, ಕೆಲವು ದಿನಗಳ ಕಾಲ ನನಗೆ ಕ್ವಾರಂಟೈನ್ ಆಗಲು ವೈದ್ಯರು ಸೂಚಿಸಿದ್ದಾರೆ. ಆ ಪ್ರಕಾರ ನಾನು ಮುನ್ನೆಚ್ಚರಿಕೆ ವಹಿಸುತ್ತಿದ್ದೇನೆ. ಈಗಾಗಲೇ ನಾನು ಕೋವಿಡ್ ಲಸಿಕೆಯನ್ನೂ ಹಾಕಿಸಿಕೊಂಡಿದ್ದೇನೆ. ಈ ಬಗ್ಗೆ ಯಾರೂ ಆತಂಕ ಪಡಬೇಕಿಲ್ಲ ಎಂದಿದ್ದಾರೆ.

Key words: corona – DCM- Laxman Savadi -Quarantine – doctor’s- advice.