ಕೊರೋನಾ ತುರ್ತು ಪರಿಸ್ಥಿತಿ ಘೋಷಿಸಿ: ಖಾಸಗಿ ಆಸ್ಪತ್ರೆಗಳನ್ನು ಸರ್ಕಾರದ ನಿಯಂತ್ರಣಕ್ಕೆ ಪಡೆಯಲಿ- ಕುರುಬೂರು ಶಾಂತಕುಮಾರ್ ಆಗ್ರಹ …

ಮೈಸೂರು,ಮೇ,1,2021(www.justkannada.in):  ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ತುರ್ತು ಪರಿಸ್ಥಿತಿ ಘೋಷಿಸಿ ಆರು ತಿಂಗಳ ಕಾಲ ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರದ ನಿಯಂತ್ರಣಕ್ಕೆ ಪಡೆಯಲಿ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್  ಆಗ್ರಹಿಸಿದ್ದಾರೆ.jk

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕುರುಬೂರು ಶಾಂತಕುಮಾರ್, ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳು ಪಟ್ಟಭದ್ರರ ಹಿಡಿತದಲ್ಲಿರುವ ಕಾರಣ ಸರ್ಕಾರದ ಆದೇಶಗಳನ್ನು ನಿರ್ಲಕ್ಷಿಸುತ್ತಿದ್ದಾರೆ.  ಬಡವರಿಗೆ ಹಳ್ಳಿಗಾಡಿನ ಜನರಿಗೆ ಸಮರ್ಪಕ ಚಿಕಿತ್ಸೆ ನೀಡುತ್ತಿಲ್ಲ.  ಹಾಸಿಗೆ ಅಮ್ಲಜನಕ ವೆಂಟಿಲೇಟರ್ ಇಲ್ಲಾ ಎನ್ನುತ್ತಾರೆ.  ಕಷ್ಟಪಟ್ಟು ಆಸ್ಪತ್ರೆಗೆ ದಾಖಲಾದ ರೋಗಿಗಳಿಗೂ ಚಿಕಿತ್ಸೆ ಫಲಕಾರಿಯಾಗದೆ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಆಸ್ಪತ್ರೆಗಳಲ್ಲಿ ಸೇವಾ ಮನೋಭಾವನೆ ಕಡಿಮೆಯಾಗಿ ಹಣ  ದೋಚುವ ದಂದೆ ಹೆಚ್ಚುತ್ತಿದೆ.  ಇದನ್ನು ಗಮನಿಸಿ ರಾಜ್ಯ ಸರ್ಕಾರ ಕೊರೋನಾ ತುರ್ತುಪರಿಸ್ಥಿತಿ ಜಾರಿ ಮಾಡಿ ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರ ಕನಿಷ್ಠ 6 ತಿಂಗಳಕಾಲ ಸರ್ಕಾರದ ನಿಯಂತ್ರಣಕ್ಕೆ ಪಡೆದುಕೊಳ್ಳಬೇಕು ಇದರಿಂದ  ಕೊರೋನಾ ಶಂಕಿತ ಜನರಿಗೆ ಬಡವರಿಗೆ ಸುಲಭವಾಗಿ ಚಿಕಿತ್ಸೆ ಕೊಡಿಸಲು ರೋಗಿಗಳಿಂದ ನಿರ್ದಿಷ್ಟ ಪಡಿಸಿದ ಹಣ ಪಡೆದುಕೊಳ್ಳುವುದು ಸಾಧ್ಯವಾಗುತ್ತದೆ  ಎಂದು ಸಲಹೆ ನೀಡಿದ್ದಾರೆ.

ಯಾವುದೇ ಆಸ್ಪತ್ರೆಗಳಲ್ಲಿ  ಚಿಕಿತ್ಸೆ ಫಲಕಾರಿಯಾಗದೆ  ಮರಣ ಹೊಂದಿದ  ರೋಗಿಯ ಹಣ ಪಾವತಿ ಮನ್ನಾ ಮಾಡಲು ಸರ್ಕಾರ ನಿರ್ಧಾರ ಕೈಗೊಳ್ಳಲಿ. ಗ್ರಾಮೀಣ ಭಾಗದಲ್ಲಿ ಕೋರೋನ ಶಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ ತಾಲೂಕು ಮಟ್ಟದಲ್ಲಿರುವ ಕೋವಿಡ್ ಕೇಂದ್ರಗಳು ಸಾಕಾಗುತ್ತಿಲ್ಲ ಆದ್ದರಿಂದ ಹಳ್ಳಿಗಾಡಿನ ಜನ  ನಗರ ಪ್ರದೇಶಗಳಿಗೆ ಬಂದು ಚಿಕಿತ್ಸೆ ಪಡೆದುಕೊಳ್ಳಲು ಆಸ್ಪತ್ರೆಗಾಗಿ ಹುಡುಕಾಡುತ್ತಿದ್ದಾರೆ ಆಸ್ಪತ್ರೆ ಸಿಗದೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಆದಕಾರಣ ತಾಲೂಕು ಮಟ್ಟದಲ್ಲಿ ಹೆಚ್ಚುವರಿಯಾಗಿ ಕೋವಿಡ್  ಕೇಂದ್ರಗಳನ್ನು ಹಾಗೂ ತಾಲೂಕು ಮಟ್ಟದ ವಾರ್ ರೂಮ್ ತುರ್ತಾಗಿ ತೆರೆಯಬೇಕು ಈ ಕೇಂದ್ರಗಳಿಗೆ ನಿವೃತ್ತ ವೈದ್ಯರ ಸೇವೆಯನ್ನ ಬಳಸಿಕೊಳ್ಳಬೇಕು  ಎಂದು ಕುರುಬೂರು ಶಾಂತಕುಮಾರ್ ತಿಳಿಸಿದರು.

ಹಳ್ಳಿಗಳಲ್ಲಿ ಕೊರೋನಾ ಪೀಡಿತರ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣ ಹಳ್ಳಿ ಜನರು ಕರೋನ ಬಗ್ಗೆ ಭಯ ಪಡುತ್ತಿರುವ ಕಾರಣ  ಸಮರೋಪಾದಿಯಲ್ಲಿ ಕೊರೋನಾ ಪರೀಕ್ಷೆಗಳನ್ನು ನಡೆಸುವಂತಾಗಬೇಕು ಕೋವಿಡ್ ಕೇಂದ್ರಗಳನ್ನು ತೆರೆಯಲು ಸಮುದಾಯ ಭವನಗಳನ್ನು ಬಳಸಿಕೊಳ್ಳಬೇಕು.Corona -declare  state- emergency -private hospitals - control – government-Kuruburu Shanthakumar.

ರಾಜ್ಯಾದ್ಯಂತ ಜನಪ್ರತಿನಿಧಿಗಳು ಇಂತಹ ಸಂಕಷ್ಟದ ಸಮಯದಲ್ಲಿ ಟೀಕೆ-ಟಿಪ್ಪಣಿಗಳನ್ನು ಬಿಟ್ಟು ಜನರಿಗೆ ತಪ್ಪು ಮಾಹಿತಿ ನೀಡುವುದನ್ನು ನಿಲ್ಲಿಸಿ ಮಾದರಿಯಾಗಿ  ಕಾರ್ಯನಿರ್ವಹಿಸುತ್ತಿರುವ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಜನಪ್ರತಿನಿಧಿ ಶಾಸಕರು ಗೋಪಾಲಯ್ಯ ಅವರ  ಸೇವಾಕಾರ್ಯವನ್ನು ಮಾದರಿಯಾಗಿ ಬಳಸಿಕೊಂಡು ರಾಜ್ಯಾದ್ಯಂತ ಆಯಾ ಕ್ಷೇತ್ರದ ಶಾಸಕರು ಸ್ವಯಂ ಪ್ರೇರಿತವಾಗಿ ಇದೇ ಕಾರ್ಯ ನಡೆಸುವ ಮೂಲಕ ಅವರ ಕ್ಷೇತ್ರದ ಮತದಾರರ ರಕ್ಷಣೆಗೆ ನಿಲ್ಲಬೇಕು  ಎಂದು ಕುರುಬೂರು ಶಾಂತಕುಮಾರ್ ಸಲಹೆ ನೀಡಿದ್ದಾರೆ.

ರೈತರ ಕೃಷಿ ಉತ್ಪನ್ನಗಳಿಗೆ ಖರೀದಿದಾರರು ಇಲ್ಲದೆ ಬೆಲೆ ಕುಸಿತ ವಾಗುತ್ತಿರುವ ಕಾರಣ ಸರ್ಕಾರವೇ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ ಖರೀದಿಸುವಂಥ ಆಗಬೇಕು ಈ ಮೂಲಕ ರೈತರ ರಕ್ಷಣೆ ಮಾಡಬೇಕು ಸರ್ಕಾರಕ್ಕೆ ಇದು ಸಾಧ್ಯವಾಗದಿದ್ದರೆ  ಕೃಷಿಕ್ಷೇತ್ರವನ್ನು ಲಾಕ್ಡೌನ್ ವ್ಯಾಪ್ತಿಗೆ ಸೇರಿಸಿ ಕೃಷಿ ಚಟುವಟಿಕೆ  ನಿಲ್ಲಿಸಿ ರೈತರು ಮತ್ತಷ್ಟು ಅಪಾಯಕ್ಕೆ ಸಿಲುಕುವುದನ್ನು ತಪ್ಪಿಸಿ. ಕೊರೋನಾ ರೋಗಿಗಳಿಗೆ ನೀಡುವ ಚಿಕಿತ್ಸೆಯಲ್ಲಿ ಹೆಚ್ಚಿನ ಶ್ರಮ ವಹಿಸುತ್ತಿರುವ ಸೇವಾ ಸಿಬ್ಬಂದಿ ಶುಶ್ರಕಿಯರು. ಆಯಾಗಳು. ಸ್ವಚ್ಛತಾ ಕರ್ಮಿಗಳ ಸಂಬಳವನ್ನು ಹೆಚ್ಚುವರಿಯಾಗಿ ಬೋನಸ್ ನೀಡುವ ಮೂಲಕ ಪ್ರೋತ್ಸಾಹಿಸಬೇಕು ಎಂದು ರಾಜ್ಯ ಸರ್ಕಾರವನ್ನ  ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.

Key words: Corona -declare  state- emergency -private hospitals – control – government-Kuruburu Shanthakumar.