ಟೋಕಿಯೊ ಒಲಿಂಪಿಕ್ಸ್ ಮೇಲೆ ಮತ್ತೆ ಕೊರೊನಾ ಕರಿನೆರಳು

kannada t-shirts

ಬೆಂಗಳೂರು, ಏಪ್ರಿಲ್ 06, 2021 (www.justkannada.in):

ಟೋಕಿಯೊ ಒಲಿಂಪಿಕ್ಸ್‌ ಮೇಲೆ ಮತ್ತೆ ಕೊರೊನಾ ಸೋಂಕಿನ ಕರಿನೆರಳು ಬೀಳುತ್ತಿದೆ.

ಕೋವಿಡ್ ಕಾರಣದಿಂದಾಗಿ ಈ ಬಾರಿಯ ಟೋಕಿಯೊ ಒಲಿಂಪಿಕ್ಸ್ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಉತ್ತರ ಕೊರಿಯಾ ಘೋಷಿಸಿದೆ. ಈ ಮೂಲಕ ಸ್ಪರ್ಧೆಯಿಂದ ಹಿಂದೆ ಸರಿದ ರಾಷ್ಟ್ರಗಳ ಮೊದಲ ಸಾಲಿನಲ್ಲಿ ನಿಂತಿದೆ.

ದಕ್ಷಿಣ ಕೊರಿಯಾಗೆ ನೆರೆ ರಾಷ್ಟ್ರದ ಈ ನಿರ್ಧಾರದಿಂದ ತೀವ್ರ ನಿರಾಸೆಯಾಗಿದೆ.

ಅಂದಹಾಗೆ ಶೀತಲ ಸಮರದ ಹಿನ್ನೆಲೆಯಲ್ಲಿ 1988ರ ಸಿಯೋಲ್ ಒಲಿಂಪಿಕ್ಸ್ ಬಹಿಷ್ಕರಿಸಿದ್ದು, ಹೊರತುಪಡಿಸಿದರೆ ಇದೇ ಮೊದಲ ಬಾರಿಗೆ ಒಲಿಂಪಿಕ್ ಕಣವನ್ನು ಉತ್ತರ ಕೊರಿಯಾ ತಪ್ಪಿಸಿಕೊಳ್ಳುತ್ತಿದೆ.

2032ರ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಜಂಟಿ ಆತಿಥ್ಯ ವಹಿಸುವ ಬಗ್ಗೆಯೂ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಮತ್ತು ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಈ ಹಿಂದೆ ನಿರ್ಧಾರಕ್ಕೆ ಬಂದಿದ್ದರು. ಆದರೆ ಇದೀಗ ಈ ಎಲ್ಲ ಬೆಳವಣಿಗೆಗಳಿಗೆ ಈ ನಿರ್ಧಾರ ತುಸು ಹಿನ್ನೆಡೆ ಮಾಡಲಿದೆ.

website developers in mysore