ದಿನೇ ದಿನೇ ಕೊರೋನಾ ಹೆಚ್ಚಳ: ಸಂಪುಟ ಸಭೆಯಲ್ಲಿ ಚರ್ಚಿಸಿ  ಸೂಕ್ತ ತೀರ್ಮಾನ- ಆರೋಗ್ಯ ಸಚಿವ ಸುಧಾಕರ್…

Promotion

ಬೆಂಗಳೂರು,ಏಪ್ರಿಲ್,26,2021(www.justkannada.in): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದ್ದು ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.jk

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ವಿಷಯಗಳ ಬಗ್ಗೆ ಚರ್ಚೆಯಾಗುತ್ತದೆ. ಕೋವಿಡ್ ಅಟ್ಟಹಾಸ ಹೆಚ್ಚಾಗಿರುವ ಈ ಸಂದರ್ಭದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಿದೆ. ಈ ಬಗ್ಗೆ ಸಚಿವರ ಜತೆ ಚರ್ಚಿಸಿ  ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದರು. Corona -hike - Discussion – Cabinet- Meeting –decision- Health Minister- Sudhakar.

ಕೊರೋನಾ ಸೋಂಕಿನ ಲಕ್ಷಣ ಕಡಿಮೆ ಇದ್ದವರು, ಇಲ್ಲದವರು  ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇದರಿಂದ ಸಮಸ್ಯೆಯಾಗುತ್ತಿದೆ. ದೇಶದಲ್ಲಿ 2ನೇ ಅಲೆ ಇದೆ. ಬೇರೆ ದೇಶಗಳಲ್ಲಿ 3, 4ನೇ ಅಲೆ ಇದೆ. ಹೀಗಾಗಿ ಜನರು ಅದಷ್ಟು ಮನೆಯಲ್ಲಿ ಇರಬೇಕು ಎಂದು ಸಚಿವ ಸುಧಾಕರ್ ಮನವಿ ಮಾಡಿದರು.

Key words: Corona -hike – Discussion – Cabinet- Meeting –decision- Health Minister- Sudhakar.