ಬೆಂಗಳೂರಿನಲ್ಲಿ ನಡೆಯುವ ದ್ರೌಪದಿ ಕರಗ ಶಕ್ತ್ಯೋತ್ಸವ ರದ್ದು…

ಬೆಂಗಳೂರು,ಏಪ್ರಿಲ್,19,2021(www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಕೊರೋನಾ ಹರಡುತ್ತಿರುವ ಹಿನ್ನೆಲೆಯಲ್ಲಿ  ಶ್ರೀ ಧರ್ಮರಾಯಸ್ವಾಮಿ ದೇವಾಲಯದಲ್ಲಿ ನಡೆಯಲಿರುವ ದ್ರೌಪದಿ ಕರಗ ಶಕ್ತ್ಯೋತ್ಸವ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.corona-increase-bangalore-karaga-utsva-cancel

ಈ ಕುರಿತು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದಿನಾಂಕ 16 -4-2021ರಲ್ಲಿ ಧಾರ್ಮಿಕ ಆಚರಣೆಗಳು, ಸಮಾರಂಭಗಳನ್ನ ನಿಷೇಧಿಸಲಾಗಿದ್ದು,  ಪ್ರಸ್ತುತ ಬೆಂಗಳೂರು ಮಹಾನಗರದಲ್ಲಿ ಕೋವಿಡ್ 19 ಪ್ರಕರಣವು ವ್ಯಾಪಕವಾಗಿ ಹರಡುತ್ತಿದ್ದು  ಸರ್ಕಾರ  ನೈಟ್ ಕರ್ಫ್ಯೂ ಜಾರಿ ಮಾಡಿದೆ.corona-increase-bangalore-karaga-utsva-cancel

ಅದ್ದರಿಂದ ಬೆಂಗಳೂರು ನಗರದಲ್ಲಿ ಕೋವಿಡ್-19 ಪ್ರಕರಣ ವ್ಯಾಪಕವಾಗಿ ಹರಡುತ್ತಿರುವುದನ್ನ ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ಸರ್ಕಾರದ ಆದೇಶದನ್ವಯ ಧಾರ್ಮಿಕ ಆಚರಣೆಗಳನ್ನು ನಡೆಸಲು ನಿಷೇಧಿಸಿರುವುದರಿಂದ ಶ್ರೀ ಧರ್ಮರಾಯಸ್ವಾಮಿ ದೇವಾಲಯದಲ್ಲಿ 2021ನೇ ಸಾಲಿನಲ್ಲಿ ನಡೆಯಲಿರುವ  ದ್ರೌಪದಿ ಕರಗ ಶಕ್ತ್ಯೋತ್ಸವ ಕಾರ್ಯಕ್ರಮವನ್ನು ನಡೆಸಲು ಸಾಧ್ಯವಿರುವುದಿಲ್ಲ.  ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Key words: corona-increase- Bangalore- karaga utsva- cancel