ಕೊರೋನಾ ಹೆಚ್ಚಳ ಹಿನ್ನೆಲೆ: 14 ದಿನಗಳ ಕಾಲ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳ ಬಂದ್ ಗೆ ನಿರ್ಧಾರ…

Promotion

ಉಡುಪಿ,ಜು,14,2020(www.justkannada.in): ದಿನೇ ದಿನೇ ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನೆಲೆ 14 ದಿನಗಳ ಕಾಲ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳನ್ನ ಬಂದ್ ಮಾಡಲು ನಿರ್ಧರಿಸಲಾಗಿದೆ.jk-logo-justkannada-logo

ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯಲ್ಲಿ ಜಿಲ್ಲೆಯ ಎಲ್ಲಾ ಶಾಸಕರು, ಅಧಿಕಾರಿಗಳು ಪಾಲ್ಗೊಂಡಿದ್ದರು.corona-increase-decision-udupi-border-bandh-14-days

ಗುರುವಾರದಿಂದ ಮುಂದಿನ 14 ದಿನಗಳ ಕಾಲ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳನ್ನು ಬಂದ್  ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಉಡುಪಿ ಜಿಲ್ಲಾ ಗಡಿ ಭಾಗದಿಂದ ಹೊರಗೆ ಹೋಗುವವರಿಗೆ ಹಾಗೂ ಒಳಗೆ ಬರುವವರಿಗೆ ನಾಳೆ ರಾತ್ರಿ (ಬುಧವಾರ) 8:00ಗಂಟೆಯವರೆಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಆ ಬಳಿಕ ಜಿಲ್ಲೆಯ ಎಲ್ಲಾ ಗಡಿಗಳನ್ನು  ಬಂದ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ  ಆದೇಶದಂತೆ ಭಾನುವಾರ  ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಇರುತ್ತದೆ ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ.

Key words: Corona- increase -decision  – Udupi –border- bandh-14 days