ಕೊರೋನಾ ಹೆಚ್ಚಳ ಹಿನ್ನೆಲೆ: ಅಧಿಕಾರಿಗಳ ಜತೆ ಸಿಎಂ ಬಿಎಸ್ ವೈ ನೇತೃತ್ವದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳೇನು ಗೊತ್ತೆ..?

Promotion

ಬೆಂಗಳೂರು,ಏಪ್ರಿಲ್,16,2021(www.justkannada.in):  ರಾಜ್ಯದಲ್ಲಿ ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಕೊರೋನಾ ತಡೆಗಾಗಿ ಸಿಎಂ ಬಿಎಸ್ ಯಡಿಯೂರಪ್ಪ ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದರು.by,election,result,Afterwards,Rahul Gandhi,Lion,fox,Mouse,Will know,Minister,K.S.Eshwarappa

ಇಂದು  ಸಿಎಂ  ಬಿಎಸ್ ವೈ ಅಧ್ಯಕ್ಷತೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ ಸುಧಾಕರ್  ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯದೆಲ್ಲೆಡೆ ಹರಡುತ್ತಿರುವ ಕೊರೋನಾ ವೈರಸ್ನ್ನು ತಡೆಗಟ್ಟಲು ತೆಗೆದುಕೊಂಡ ನಿರ್ಣಯಗಳು  ಈ ಕೆಳಕಂಡಂತಿವೆ…

1.ಕಾರ್ಪೋರೇಟ್ ವಲಯದ ಆಸ್ಪತ್ರೆಗಳು ತಮ್ಮ ಹತ್ತಿರದ ಹೋಟೆಲ್ಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಕಡಿಮೆ ರೋಗ ಲಕ್ಷಣಗಳುಳ್ಳ ರೋಗಿಗಳಿಗೆ ನೋಡಿಕೊಳ್ಳಲು ತಾತ್ಕಾಲಿಕ ಆಸ್ಪತ್ರೆಗಳನ್ನು ಆರಂಭಿಸಲು ಕ್ರಮ ವಹಿಸುವುದು.

2.ಹೆಚ್ಚು ರೋಗ ಲಕ್ಷಣಗಳುಳ್ಳ ಅಗತ್ಯವಿರುವ ರೋಗಿಗಳನ್ನು ಮಾತ್ರ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲು ಕ್ರಮ ವಹಿಸುವುದು.

3.ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ರಷ್ಟು ಹಾಸಿಗೆಗಳನ್ನು ಸರ್ಕಾರದಿಂದ ದಾಖಲಿಸುವ ರೋಗಿಗಳಿಗೆ ಕಾಯ್ದಿರಿಸಲು ಕೂಡಲೇ ಕ್ರಮ ಕೈಗೊಳ್ಳುವುದು.

4.ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 1000 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಕಾಯ್ದಿರಿಸುವುದು.

5.ಸರ್ಕಾರಿ ಆಸ್ಪತ್ರೆಗಳಲ್ಲಿ 1000 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಕಾಯ್ದಿರಿಸುವುದು.

6.ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ 5,000 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಕಾಯ್ದಿರಿಸುವುದು.

7.ಅಗತ್ಯವಿರುವ ರೋಗಿಗಳಿಗೆ ಕೂಡಲೇ ಚಿಕಿತ್ಸೆ ನೀಡಲು ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಒಂದು ಐ.ಪಿ.ಎಸ್. ಮತ್ತು ಐ.ಎ.ಎಸ್. ಅಧಿಕಾರಿಗಳನ್ನು ಹಾಗೂ ಬಿ.ಡಬ್ಲ್ಯೂ.ಎಸ್.ಎಸ್.ಬಿ., ಬೆಸ್ಕಾಂ ಮತ್ತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸುವುದು.

8.ಕೊರೋನಾ ವೈರಸ್ ನಿಂದ ತೀವ್ರತರವಾಗಿ ಬಳಲುತ್ತಿರುವ ರೋಗಿಗಳಿಗೆ ಮಾತ್ರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು. ಉಳಿದಂತೆ ಕೊರೋನಾ ಲಕ್ಷಣಗಳಿಲ್ಲದ  ರೋಗಿಗಳಿಗೂ  ತಾತ್ಕಾಲಿಕ ಚಿಕಿತ್ಸಾ  ಕೇಂದ್ರಗಳಲ್ಲಿ ಚಿಕಿತ್ಸೆ ನೀಡುವುದು ಹಾಗೂ  ಅಗತ್ಯವಿರುವಷ್ಟು ದಿನಗಳು ಮಾತ್ರ  ರೋಗಿಗಳನ್ನು  ಆಸ್ಪತ್ರೆಗಳಲ್ಲಿ  ಚಿಕಿತ್ಸೆ ನೀಡಿ  ಗುಣಮುಖರಾದ ಕೂಡಲೇ  ಆಸ್ಪತ್ರೆಯಿಂದ  ಬಿಡುಗಡೆಗೊಳಿಸುವುದು.

9.ರಾಜ್ಯದಲ್ಲಿ ಸದ್ಯಕ್ಕೆ Remdesivir ಕೊರತೆ ಇರುವುದಿಲ್ಲ.  ಆದಾಗ್ಯೂ ಹೆಚ್ಚುವರಿ ಡೋಸ್ ಗಳನ್ನು ಖರೀದಿ ಮಾಡಲು ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಅದನ್ನು ಅಂತಿಮಗೊಳಿಸಿ ಹೆಚ್ಚುವರಿ ಡೋಸ್ಗಳನ್ನು ಸಂಗ್ರಹಿಸಲು ಕ್ರಮ ಕೈಗೊಳ್ಳುವುದು.

10.ಪ್ರಸಕ್ತ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇರುವುದಿಲ್ಲ.  ಆದಾಗ್ಯೂ 5,000 ಆಕ್ಸಿಜನ್ ಸಿಲಿಂಡರ್ಗಳ ಬೇಡಿಕೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವುದು.

11.ಪದೇ ಪದೇ ಆಕ್ಸಿಜನ್ ಸಿಲಿಂಡರ್ಗಳ ಬದಲಾವಣೆ ತಪ್ಪಿಸಲು ಜಂಬೋ ಸಿಲಿಂಡರ್ಗಳನ್ನು ಖರೀದಿಸಲು ಕೂಡಲೇ ಕ್ರಮ ಕೈಗೊಳ್ಳುವುದು.

12.ಈಗಾಗಲೇ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಿದ್ದು, ಅದೇ ರೀತಿಯಾಗಿ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಟೆಂಡರ್ ಕರೆದಿದ್ದು, ಕೂಡಲೇ ಅದನ್ನು ಅಂತಿಮಗೊಳಿಸಿ ಘಟಕ ಸ್ಥಾಪಿಸಲು ತ್ವರಿತ ಕ್ರಮ ಕೈಗೊಳ್ಳುವುದು.

13.ಫ್ರಂಟ್ಲೈನ್ ವರ್ಕರ್ ಗಳಾದ ವೈದ್ಯರು, ನರ್ಸ್ಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಕೂಡಲೇ ಕ್ರಮ ಕೈಗೊಳ್ಳುವುದು.

14.ರಾಜ್ಯಾದ್ಯಂತ ಕಾಟ್ಯಾಂಕ್ಟ್  ಟ್ರೇಸಿಂಗ್  ತ್ವರಿತಗೊಳಿಸುವುದು.

15.ಹೋಮ್ ಐಸೋಲೇಷನ್ ಇರುವ ರೋಗಿಗಳಿಗೆ ಮುದ್ರೆ ಹಾಕಲು ಕ್ರಮ ಕೈಗೊಳ್ಳುವುದು.

16.ಪ್ರತಿದಿನ ನಡೆಸುವ ಕೋವಿಡ್ ಟೆಸ್ಟ್ ಪಲಿತಾಂಶವು (ಟೆಸ್ಟ ರಿಪೋರ್ಟ) 24 ಗಂಟೆಯೋಳಗಾಗಿ ತಪ್ಪದೇ ಲಭ್ಯವಾಗುವಂತೆ ಕ್ರಮವಹಿಸಲಾವುದು ಮತ್ತು ಟೆಸ್ಟಿಂಗ್ ಅವಧಿಯನ್ನು ಇನ್ನೂ ಕಡಿಮೆಗೊಳಿಸಲು ಕೂಡಲೇ ಅಗತ್ಯ ಕ್ರಮ ವಹಿಸುವುದು.

17.ಕಂಟೈನ್ಮೆಂಟ್ ಝೋನ್ ಗಳನ್ನು ಮತ್ತು ಮೈಕ್ರೋ ಕಂಟೈನ್ಮೆಂಟ್ ಝೋನ್ ಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು. Corona- increase- decisions -meeting - CM BS yeddyurappa

18.ಅನಗತ್ಯವಾಗಿ ಜನ ಗುಂಪು ಸೇರುವುದನ್ನು ತಡೆಗಟ್ಟಲು ಎಲ್ಲಾ ಕ್ರಮ ಕೈಗೊಳ್ಳುವುದು.

19.ಬೇಡಿಕೆಗನುಗುಣವಾಗಿ ಉಚಿತವಾಗಿ 108 ಸೇರಿದಂತೆ ಅಗತ್ಯ ಆಂಬುಲೆನ್ಸ್ ಗಳನ್ನು ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೆಂದ್ರಗಳಲ್ಲೂ ಲಭ್ಯವಿರುವಂತೆ ನೋಡಿಕೊಳ್ಳುವುದು.

20.ಬೆಂಗಳೂರು ನಗರದಲ್ಲಿ ಒಟ್ಟಾರೆಯಾಗಿ 400 ಆಂಬ್ಯೂಲೆನ್ಸ್ಗಳನ್ನು ಕೋವಿಡ್ ರೋಗಿಗಳಿಗೋಸ್ಕರ ಉಚಿತವಾಗಿ ಸೇವೆ ಒದಗಿಸಲು ಮೀಸಲಿರಿಸುವುದು.

21.ಬೆಂಗಳೂರು ನಗರದಲ್ಲಿ ಕೋವಿಡ್ನಿಂದಾಗಿ ಮೃತಪಟ್ಟ ಶವಗಳ ಸಾಗಿಸಲು 49 ಆಂಬ್ಯೂಲೆನ್ಸ್ಗಳನ್ನು ಉಚಿತವಾಗಿ ಸೇವೆ ಒದಗಿಸಲು ಮೀಸಲಿರಿಸುವುದು.

22.ಚಿತಾಗಾರಗಳಲ್ಲಿ ಕೋವಿಡ್ನಿಂದಾಗಿ ಮೃತಪಟ್ಟ ಶವಗಳ ಅಂತ್ಯ ಕ್ರಿಯೆಯನ್ನು ಉಚಿತವಾಗಿ ನೆರವೇರಿಸುವುದು.

23.ಬಿ.ಬಿ.ಎಂ.ಪಿ. ಯು ತನ್ನ ಎಲ್ಲಾ ವಲಯಗಳ ಮತ್ತು ನಿಯಂತ್ರಣ ಕೊಠಡಿಗಳನ್ನು ಸಜ್ಜುಗೊಳಿಸಿ ಕೋವಿಡ್ ರೋಗಿಗಳ ಸಹಾಯಕ್ಕೆ ಸದಾ ಬದ್ಧರಾಗಿರುವಂತೆ ಕ್ರಮ ವಹಿಸುವುದು ಹಾಗೂ ಸಹಾಯವಾಣಿಗಳಿಗೆ ನುರಿತ ವ್ಯಕ್ತಿಗಳನ್ನು ನೇಮಿಸಿ ಸದೃಢಗೊಳಿಸುವುದು.

ENGLISH SUMMARY….

Pandemic: Check out the decisions taken in today’s meeting held by the CM with officials
Bengaluru, Apr. 16, 2021 (www.justkannada.in): Chief Minister B.S. Yedyurappa today held an emergency meeting with officials of the concerned department following the fast spreading of the corona second wave in the state.
The following measures were taken in the meeting. as a precautionary measure to prevent the further spread of the pandemic. The meeting was attended by Health and Family Welfare Minister Dr. K. Sudhakar and senior officials of various government departments:
1. Measures to start temporary hospitals by making agreements with nearest corporate hospitals and hotels to handle corona patients with mild symptoms;
2. Only patients who have serious symptoms are advised to be admitted to the hospitals for treatment;
3. Measures to reserve 50% beds in private hospitals for government patients ;
4. Reservation of 1000 beds in government medical colleges;
5. Reservation of 1000 beds in government hospitals;
6. Reservation of 5,000 beds in private medical colleges for COVID patients;
7. Engage one IPS and IAS officer and one official from the BWSSB, BESCOM and Suvarna Arogya Suraksha Trust as nodal officers to monitor and ensure availability of immediate treatment in private hospitals to needy patients;
8. Only patients who are suffering from acute symptoms will be treated in the hospitals. Patients with mild symptoms will be treated in temporary health centers and measures will be taken to hold the patients only up to the required number of days and discharge them immediately after they are cured;
9. There is no shortage of Remdsevir injections in the state as of now. Even though tender has been invited to purchase additional doses and measures will be taken to store additional doses after finalizing the tenders;
10. There is no shortage of oxygen in the state as of now. But the Govt. of India has been requested to provide 5,000 additional oxygen cylinders to face emergency;
11. Measures will be taken to purchase jumbo cylinders to avoid changing of oxygen cylinders frequently;
12. Oxygen production units have been established in several medical colleges already. Tenders have been invited to establish oxygen production units in all district hospitals;
13. Measures to be taken to appoint frontline workers like doctors, nurses temporarily on contract basis;
14. Expedite contact tracing across the state;
15. Measures to put a seal on the palms of patients who are in home isolation;
16. Measures to be taken to ensure availability of COVID test results within 24 hours and reduce the testing time;
17. Implement guidelines of containment zones and micro containment zones strictly;
18. Take all required measures to avoid gatherings;
19. Ensure availability of ambulances including 108 ambulance services in all the district headquarters including Bengaluru city;
20. Reserve 400 ambulances in Bengaluru to attend COVID patients and offer free of cost services;Corona- increase- decisions -meeting - CM BS yeddyurappa
21. Reserve services of 49 ambulances to transport bodies of patients who have expired due to COVID free of cost;
22. Conduct free cremation of people who die due to corona in crematoriums
23. Take measures to ensure that the BBMP will equip control rooms and be ready to serve COVID patients all the time and press experienced people on duty in the helpline centers.
Keywords: CM meeting/ COVID-19 Pandemic tough rules/ measures

Key words: Corona- increase- decisions -meeting – CM BS yeddyurappa