ಕೇರಳದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ:  ಕೇರಳ- ಮೈಸೂರು ಜಿಲ್ಲೆ ಗಡಿ ಭಾಗದಲ್ಲಿ ಹೈ ಅಲರ್ಟ್….

ಮೈಸೂರು,ಫೆಬ್ರವರಿ,20,2021(www.justkannada.in):  ಕೇರಳದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಕೇರಳ- ಮೈಸೂರು ಜಿಲ್ಲೆ ಗಡಿ ಭಾಗದಲ್ಲಿ ಹೈ ಅಲರ್ಟ್ ಆಗಿದ್ದು, ಕೇರಳದಿಂದ ಬರುವ ಎಲ್ಲ ಪ್ರಯಾಣಿಕರನ್ನ ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲ್ಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ಆರೋಗ್ಯ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದ್ದು, ಕೇರಳದಿಮದ ಬರುವ ಎಲ್ಲ ಪ್ರಯಾಣಿಕರನ್ನ ತಪಾಸಣೆ ಮಾಡಲಾಗುತ್ತಿದೆ. ಅಧಿಕಾರಿಗಳು ಕೋವಿಡ್ ಟೆಸ್ಟ್ ವರದಿ ಪರಿಶೀಲನೆ ನಡೆಸುತ್ತಿದ್ದು, ಎಲ್ಲಾ ಪ್ರಯಾಣಿಕರಿಗೂ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸ್ ಮಾಡಲಾಗುತ್ತಿದೆ.Corona- Increase – Kerala- High alert - Kerala-Mysore district -border.

ಕೇರಳದಿಂದ ಬರುವ ಎಲ್ಲಾ ವಾಹನಗಳನ್ನ ತಪಾಸಣೆಗೊಳಪಡಿಸಲಾಗುತ್ತಿದೆ, ಕೇರಳ- ಮೈಸೂರು ನಡುವೆ ದಿನನಿತ್ಯ 700 ರಿಂದ 800 ಜನ ಪ್ರಯಾಣಿಸುತ್ತಾರೆ. ಹೀಗಾಗಿ ಎಲ್ಲರ ಮೇಲೂ ನಿಗಾ ಇಡಲಾಗಿದೆ.

Key words: Corona- Increase – Kerala- High alert – Kerala-Mysore district -border.