ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆ: ಇಂದು 373 ಕೋವಿಡ್ ಪ್ರಕರಣ ಪತ್ತೆ.

Promotion

ಬೆಂಗಳೂರು,ಅಕ್ಟೋಬರ್,11,2021(www.justkannada.in): ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಕೆಯಾಗುತ್ತಿದ್ದು ಇಂದು ರಾಜ್ಯದಲ್ಲಿ 373 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.

ಇಂದು ಕೊರೋನಾಗೆ 10 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಕೊರೋನಾದಿಂದ ಇಂದು 611 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 10 ಸಾವಿರಕ್ಕಿಂತ ಕೆಳಗಿಳಿದಿದ್ದು, 9906 ಸಕ್ರಿಯ ಪ್ರಕರಣಗಳಿವೆ. ಇಂದು 82,853 ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ 0.45 ಕೋವಿಡ್ ಪಾಸಿಟಿವಿಟಿ ದರ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 146 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 210 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5 ಸೋಂಕಿತರು ಮೃತಪಟ್ಟಿದ್ದಾರೆ. 6580 ಸಕ್ರಿಯ ಪ್ರಕರಣಗಳು ಇವೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Corona- infection – 373 covid- case- detected -today.