ರಾಜ್ಯದಲ್ಲಿ ಮತ್ತೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆ…

Promotion

ಚಿಕ್ಕಬಳ್ಳಾಪುರ,ಮಾ,21,2020(www.justkannada.in):  ರಾಜ್ಯದಲ್ಲಿ ಮತ್ತೊಬ್ಬರಿಗೆ ಮಹಾಮಾರಿ ಕೊರೋನಾ ವೈರಸ್ ಇರುವುದು ಪತ್ತೆಯಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ಮೆಕ್ಕಾದಿಂದ ವಾಪಸ್ಸಾಗಿದ್ದ 32 ವರ್ಷದ ವ್ಯಕ್ತಿ. ಚಿಕ್ಕಬಳ್ಳಾಪುರದ ಗೌರಿಬಿದನೂರು ಮೂಲದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಶ್ರೀರಾಮುಲು, ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಮೆಕ್ಕಾಪ್ರವಾಸದಿಂದ ಹಿಂತಿರುಗಿದ್ದ 32 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಅವರನ್ನ ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ನಾಗರೀಕರು ಯಾರೂ ಆತಂಕಕ್ಕೆ ಒಳಗಾಗಬೇಡಿ ಎಂದು ಹೇಳಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

Key words: Corona –infection- detected – another – state.