ಡಿ.ಕೆ ಶಿವಕುಮಾರ್ ಗೆ ಕೊರೋನಾ ಸೋಂಕು: ಶೀಘ್ರ ಗುಣಮುಖರಾಗುವಂತೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾರೈಕೆ….

Promotion

ಬೆಂಗಳೂರು,ಆಗಸ್ಟ್,25,2020(www.justkannada.in):  ಕೊರೋನಾ ಸೋಂಕಿಗೆ ತುತ್ತಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಶೀಘ್ರ ಗುಣಮುಖರಾಗಲೆಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹಾರೈಸಿದ್ದಾರೆ.jk-logo-justkannada-logo

ಕೊರೋನಾ ಸೋಂಕಿಗೆ ತುತ್ತಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿ.ಕೆ ಶಿವಕುಮಾರ್ ಅವರಿಗೆ ಸೋನಿಯಾ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಅನೇಕ ಎಐಸಿಸಿ ಮುಖಂಡರು, ಕಾಂಗ್ರೆಸ್ ನಾಯಕರು ಮಂಗಳವಾರ ಮಧ್ಯಾಹ್ನ  ದೂರವಾಣಿ ಕರೆ ಮಾಡಿ, ಆರೋಗ್ಯ ಕ್ಷೇಮ ವಿಚಾರಿಸಿದರು. ಆದಷ್ಟು ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.corona-infection-dk-sivakumar-sonia-gandhi-rahul-gandhi-speedy-recovery

ಕಳೆದ ನಾಲ್ಕೈದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಡಿ.ಕೆ ಶಿವಕುಮಾರ್ ಕೊರೋನಾ ಟೆಸ್ಟ್ ಮಾಡಿಸಿದ್ದರು. ಇಂದು ಡಿ.ಕೆ ಶಿವಕುಮಾರ್ ಗೆ ಸೋಂಕು ಇರುವುದು ದೃಢಪಟ್ಟಿದೆ.

Key words: Corona -infection – DK Sivakumar-Sonia Gandhi-Rahul Gandhi – speedy recovery.