ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಮೊದಲ ಪೊಲೀಸ್ ಬಲಿ..

ಬೆಂಗಳೂರು,ಜೂ,16,2020(www.justkannada.in): ರಾಜ್ಯದಲ್ಲಿ ಕೊರೋನಾ ವೈರಸ್  ಹೆಚ್ಚಾಗುತ್ತಿದ್ದು ಇದೀಗ ರಾಜ್ಯದಲ್ಲಿ ಕೊರೊನಾಗೆ ಮೊದಲ ಪೊಲೀಸ್ ಬಲಿಯಾಗಿದ್ದಾರೆ.

ಬೆಂಗಳೂರು ವಿ.ವಿ.ಪುರಂ ಸಂಚಾರಿ ಠಾಣೆ ಎಎಸ್ ಐ ಕೊರೋನಾದಿಂದ ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಎಎಸ್ ಐ 15 ದಿನಗಳಲ್ಲಿ ನಿವೃತ್ತರಾಗಲಿದ್ದರು. ಥಣಿಸಂದ್ರದ ಮನೆಯಲ್ಲಿ ಎಎಸ್ ಐ ದಿಢೀರನೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.Corona -infection – first- police –death-Karnataka

ಮರಣೋತ್ತರ ತಪಾಸಣೆ ಸಂದರ್ಭದಲ್ಲಿ ಎಎಸ್ ಐಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಇನ್ನು ಅದೇ ಠಾಣೆಯ ಮತ್ತೊಬ್ಬ ಎಎಸ್ಐಗೂ ಸೋಂಕು ಇರುವ ಶಂಕೆ ವ್ಯಕ್ತವಾಗಿದೆ. ಇದೀಗ ವಿವಿಪುರಂ ಪೊಲೀಸ್ ಠಾಣೆಗೆ ಸ್ಯಾನಟೈಸ್  ಮಾಡಿ ಸೀಲ್ ಡೌನ್ ಮಾಡಲಾಗಿದೆ.

Key words: Corona -infection – first- police –death-Karnataka